Advertisement

ಅಂಗನವಾಡಿ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್  ಮಿಕ್ಸ್!

10:44 AM Jan 04, 2022 | Team Udayavani |

ವಾಡಿ: ಕಲ್ಯಾಣ ಕರ್ನಾಟಕದ ಬಡ ಮಕ್ಕಳನ್ನು ಕಾಡುತ್ತಿರುವ ಅಪೌಷ್ಟಿಕತೆ ನಿವಾರಿಸಲು ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮೊಟ್ಟೆ ಬಾಳೆಹಣ್ಣು ವಿತರಿಸುತ್ತಿರುವ ಸರಕಾರ, ಅಂಗನವಾಡಿ ಮಕ್ಕಳಿಗೆ ಪ್ಲಾಸ್ಟಿಕ್ ಅಕ್ಕಿ ವಿತರಿಸುತ್ತಿರುವುದು ಬೆಳಕಿಗೆ ಬಂದಿದ್ದು, ಪೋಷಕರ ಆಕ್ರೋಶಕ್ಕೆ ಗುರಿಯಾಗಿದೆ.

Advertisement

ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಪೂರೈಸಲಗುತ್ತಿರುವ ಅನ್ನಭಾಗ್ಯ ಅಕ್ಕಿಯೊಂದಿಗೆ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆಯಾಗಿ ಮಕ್ಕಳ ಉದರ ಸೇರುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ 6ರ ಜಾಂಬವೀರ ಕಾಲೋನಿಯ ಅಂಗನವಾಡಿ ಕೇಂದ್ರದ ದಲಿತ ಕುಟುಂಬಗಳ ಮನೆಯಲ್ಲಿ ಅನ್ನ ಬೇಯಿಸುವಾಗ ಈ ಪ್ಲಾಸ್ಟಿಕ್ ಅಕ್ಕಿಗಳು ಪೋಷಕರ ಕಣ್ಣಿಗೆ ಬಿದ್ದಿದೆ. ಸರಕಾರ ನಮ್ಮ ಮಕ್ಕಳ ಹಸಿದ ಹೊಟ್ಟೆಗೆ ವಿಷ ಕೊಟ್ಟಿದೆ ಎಂದು ಗುಡುಗಿದ್ದಾರೆ.

ಇಂಥ ಕಳಪೆ ಅಕ್ಕಿ ಹಾಗೂ ಪ್ಲಾಸ್ಟಿಕ್ ಅಕ್ಕಿಯನ್ನು ಅಧಿಕಾರಿಗಳ ಮಕ್ಕಳಿಗೆ ತಿನ್ನಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತನಿಖೆ ಕೈಗೊಂಡು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಬಡಾವಣೆಯ ಮಹಿಳೆಯರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next