Advertisement
ಮಂಗಳೂರು ಹೊರವಲಯದ ಗಂಜೀಮಠದಲ್ಲಿ 62.77 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಈ ಯೋಜನೆ ಶೇ. 50 ಕೇಂದ್ರ ಸರಕಾರ ಮತ್ತು ಉಳಿದ ಶೇ. 50 ಭಾಗವನ್ನು ಕೆಐಎಡಿಬಿ ಹೂಡಿಕೆಯೊಂದಿಗೆ ಅನುಷ್ಠಾನಗೊಳ್ಳಲಿದೆ.
Related Articles
Advertisement
ಪ್ಲಾಸ್ಟಿಕ್ ತ್ಯಾಜ್ಯದ ಸಮರ್ಪಕ ವಿಲೇವಾರಿ
ಎಂಆರ್‌ಪಿಎಲ್‌ನಿಂದ ಪಾಲಿ ಪ್ರೊಪಲಿನ್ ಘಟಕ ಆರಂಭವಾಗುತ್ತಿ ದ್ದಂತೆಯೇ ಕರಾವಳಿಯಲ್ಲಿ ಪ್ಲಾಸ್ಟಿಕ್ ಪಾರ್ಕ್‌ನ ಬೇಡಿಕೆ ಗರಿಗೆದರಿತ್ತು. ಪಾರ್ಕ್‌ಗೆ ಸ್ಥಾಪಿಸುವಂತೆ ಕೆನರಾ ಪ್ಲಾಸ್ಟಿಕ್ ಮ್ಯಾನುಫ್ಯಾಕ್ಚರರ್ಸ್ ಆಂಡ್ ಟ್ರೇಡರ್ಸ್ ಅಸೋಸಿಯೇಶನ್ ವತಿಯಿಂದಲೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಪಾಲಿಪ್ರೊಪಲಿನ್ ಘಟಕದ ತ್ಯಾಜ್ಯವನ್ನು ಪ್ಲಾಸ್ಟಿಕ್ ಪಾರ್ಕ್‌ನ ಕಚ್ಚಾ ವಸ್ತುವಾಗಿ ಬಳಕೆ ಮಾಡಬಹುದಾಗಿದೆ. ಪ್ಲಾಸ್ಟಿಕ್ ಪಾರ್ಕ್ ಯೋಜನೆಯಲ್ಲಿ ಪ್ಲಾಸ್ಟಿಕ್ ತಯಾರಿಕೆಯ ಜತೆಗೆ, ಪ್ಲಾಸ್ಟಿಕ್‌ನ ಮರುಬಳಕೆ ತಂತ್ರಜ್ಞಾನಕ್ಕೂ ಹೆಚ್ಚಿನ ಒತ್ತು ನೀಡಲು ಉದ್ದೇಶಿಸಲಾಗಿದೆ. ಇದರಿಂದ ಪ್ಲಾಸ್ಟಿಕ್ ತ್ಯಾಜ್ಯದ ಸಮರ್ಪಕ ವಿಲೇವಾರಿ ಆಗಲಿದ್ದು, ಇನ್ನೊಂದೆಡೆ ದೇಶದಲ್ಲಿ ಬೇಡಿಕೆ ಇರುವ ಪ್ಲಾಸ್ಟಿಕ್ ಉತ್ಪನ್ನಗಳನ್ನು ತಯಾರಿಸಲು ಸಾಧ್ಯವಾಗಲಿದೆ. ನಳಿನ್ ಅಭಿನಂದನೆ
ಪ್ಲಾಸ್ಟಿಕ್ ಯೋಜನೆ ಕಾರ್ಯರೂಪಕ್ಕೆ ಬರಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಕೇಂದ್ರದ ರಾಸಾಯನಿಕ ಖಾತೆ ಸಚಿವ ಭಗವಂತ್ ಕೂಬಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯದ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.