ಬೆಂಗಳೂರು: ದೇಶದ ಪ್ಲಾಸ್ಟಿಕ್ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ದೇಶದಲ್ಲಿ ಎರಡು ಪ್ಲಾಸ್ಟಿಕ್ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದರು.
ಕರ್ನಾಟಕದ ಮಂಗಳೂರು ಹಾಗೂ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ತಲಾ ಒಂದೊಂದು ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸುವ ಬಗ್ಗೆ ಇತ್ತೀಚೆಗೆ ನಡೆದ ರಾಸಾಯನಿಕ ಇಲಾಖೆಯ ಯೋಜನೆ ಚಾಲನಾ ಸಮಿತಿ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ್ದೇವೆ ಎಂದರು.
ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಮಾಹಿತಿ ನೀಡಿದ್ದೇವೆ. ಆದಷ್ಟು ಬೇಗ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಿ ಅಂತಿಮ ಒಪ್ಪಿಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಆರು ತಿಂಗಳ ಒಳಗೆ ಅಂತಿಮ ಒಪ್ಪಿಗೆ ನೀಡಿ ಯೋಜನೆಯ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಇದನ್ನೂ ಓದಿ:ವಂಶಪಾರಂಪರ್ಯ ರಾಜಕಾರಣಕ್ಕಿಲ್ಲ ಅವಕಾಶ: ನಳೀನಕುಮಾರ ಕಟೀಲ್
ಪ್ಲಾಸ್ಟಿಕ್ ಸಂಬಂಧಿತ ಕೈಗಾರಿಕೆಗಳಿಳಿಗೆ ಸೀಮಿತವಾದ ಕೈಗಾರಿಕಾಭಿವೃದ್ಧಿ ಕೇಂದ್ರವಾಗಿರಲಿದೆ. ಪ್ಲಾಸ್ಟಿಕ್ ಸಂಬಂಧಿತ ಕೈಗಾರಿಕೆಗಳ ಅಭಿವೃದ್ಧಿಗೆ ಬೇಕಾದ ಎಲ್ಲ ಆಧುನಿಕ ತಂತ್ರಜ್ಞಾನ ಸೌಕರ್ಯಗಳೂ ಇಲ್ಲಿರುತ್ತವೆ. ಇಲ್ಲಿ ಸ್ಥಾಪಿತವಾಗುವ ಎಲ್ಲ ಕೈಗಾರಿಕಾ ಘಟಕಗಳೂ ಈ ಸೌಲಭ್ಯಗಳನ್ನು ಬಳಸಿಕೊಳ್ಳಬಹುದು. ಇದರಿಂದ ನಮ್ಮ ಸ್ವದೇಶಿ ಪ್ಲಾಸ್ಟಿಕ್ ಕೈಗಾರಿಕೆಗಳು ಅಂತಾರಾಷ್ಟ್ರೀಯ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸಬಹುದು. ಆಗ ನಮ್ಮ ಕಂಪನಿಗಳು ಜಾಗತಿಕ ಮಾರುಕಟ್ಟೆಯಲ್ಲಿ ಪೈಪೋಟಿ ನಡೆಸಲು ಶಕ್ತವಾಗುತ್ತವೆ. ಆಗ ರಫ್ತು ವೃದ್ಧಿಯಾಗುತ್ತದೆ ಎಂದು ವಿವರಿಸಿದರು.
4 ರಸಗೊಬ್ಬರ ಕಾರ್ಖಾನೆ ಪುನಶ್ಚೇತನಕ್ಕೆ 50 ಸಾವಿರ ಕೋಟಿ ರೂ: ವಿವಿಧ ಕಾರಣಗಳಿಗಾಗಿ ಸ್ಥಗಿತಗೊಂಡಿದ್ದ ನಾಲ್ಕು ರಸಗೊಬ್ಬರ ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಲಾಗುತ್ತಿದ್ದು ಇದಕ್ಕಾಗಿ 50 ಸಾವಿರ ಕೋಟಿ ರೂ. ಗಿಂತ ಹೆಚ್ಚು ಹಣ ವೆಚ್ಚಮಾಡಲಾಗುತ್ತಿದೆ. ಈ ಪೈಕಿ ರಾಮಗುಂಡಮ್ ಸ್ಥಾವರದ ಕೆಲಸ ಬಹುತೇಕ ಮುಗಿದಿದ್ದು ಯೂರಿಯಾ ಉತ್ಪಾದನೆಗೆ ಸಜ್ಜಾಗಿದೆ ಎಂದು ಡಿವಿಎಸ್ ಹೇಳಿದರು.
ಇದನ್ನೂ ಓದಿ: ‘ಜಿಡಿಪಿ’ಯಲ್ಲಿ ಭಾರಿ ಬೆಳವಣಿಗೆ ಕಂಡಿದೆ : ರಾಹುಲ್ ಟೀಕೆ
ಅದೇ ರೀತಿ ಔಷಧ ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿ ಮಾಡಲು ನಾನು ನಿರ್ವಹಿಸುವ ಔಷಧ ಇಲಾಖೆಯು ಹಲವು ಯೋಜನೆಗಳನ್ನು ರೂಪಿಸಿದೆ. ಈ ಉಪಕ್ರಮಗಳಲ್ಲಿ ಮೂರು ಬಲ್ಕ್ ಡ್ರಗ್ ಪಾರ್ಕ್ ಗಳು ಹಾಗೂ ನಾಲ್ಕು ಮೆಡಿಕಲ್ ಡಿವೈಸ್ ಪಾರ್ಕ್ ಗಳು ಸೇರಿವೆ ಎಂದು ಅವರು ತಿಳಿಸಿದರು.