Advertisement

ಶಾಲೆಗಳಲ್ಲಿ ಪ್ಲಾಸ್ಟಿಕ್‌ ಉತ್ಪನ್ನ ನಿಷೇಧ

11:04 PM Dec 09, 2021 | Team Udayavani |

ಬೆಂಗಳೂರು: ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್‌ ನಿಷೇಧಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

Advertisement

ಶಾಲೆಗಳು ಹಾಗೂ ಇಲಾಖೆ ಕಚೇರಿಗಳಿಗೆ  ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಗೌರವಾರ್ಥವಾಗಿ ಪ್ಲಾಸ್ಟಿಕ್‌ನಿಂದ ಸುತ್ತಿದ ಹೂಗುತ್ಛ, ಪ್ಲಾಸ್ಟಿಕ್‌ ಹಾಳೆ/ಕಾಗದದಿಂದ ಪ್ಯಾಕ್‌ ಮಾಡಿದ ಪುಸ್ತಕಗಳನ್ನು ನೀಡಲಾಗುತ್ತಿದೆ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಚಿವರು, ರಾಜ್ಯದಲ್ಲಿ ಕಡ್ಡಾಯವಾಗಿ ಪ್ಲಾಸ್ಟಿಕ್‌ ನಿಷೇಧಿಸಿದ್ದರೂ ಈ ರೀತಿ ನಡೆದುಕೊಳ್ಳ ಲಾಗುತ್ತಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳು ವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಾಲೆಗಳಲ್ಲಿ  ಪ್ಲಾಸ್ಟಿಕ್‌  ಬ್ಯಾಗ್‌, ಭಿತ್ತಿಪತ್ರ, ತೋರಣ, ಬಾವುಟ, ಫ್ಲೆಕ್ಸ್‌, ಪ್ಲಾಸ್ಟಿಕ್‌ ತಟ್ಟೆ-ಲೋಟ, ಚಮಚಗಳನ್ನು ನಿರ್ಬಂಧಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ| ಆರ್‌. ವಿಶಾಲ್‌ ಸುತ್ತೋಲೆ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next