Advertisement

ಪ್ಲಾಸ್ಟಿಕ್‌ಮುಕ್ತ ಪರಿಸರ ನಮ್ಮ ಹೊಣೆ

09:51 AM Jun 07, 2019 | Team Udayavani |

ಕಾರವಾರ: ಪ್ಲಾಸ್ಟಿಕ್‌ ಮಹಾಮಾರಿಗೆ ನಾವೆಲ್ಲರೂ ತುತ್ತಾಗಿ ನರಳುವಂತಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನಾರಾಯಣ ಕಳವಳ ವ್ಯಕ್ತಪಡಿಸಿದ್ದಾರೆ.

Advertisement

ಜಿಲ್ಲಾಡಳಿತ, ಜಿಪಂ, ಅರಣ್ಯ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರ ಮಂಡಳಿ, ಪರಿಸರ ಇಲಾಖೆ ಸಹಯೋಗದಲ್ಲಿ ಕಾರವಾರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್‌ ಮಹಾಮಾರಿಗೆ ಜಾಗತಿಕ ತಪಮಾನ, ಪರಿಸರ ಮಾಲಿನ್ಯ, ವಾಯು ಮಾಲಿನ್ಯ, ಜಲ ಮಾಲಿನ್ಯದಂತಹ ದುರಂತ ಸ್ಥಿತಿಯಲ್ಲಿ ನಾವಿದ್ದು ನರಳುವಂತಾಗಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿದ್ದ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಮಾತನಾಡಿ, ಪ್ರಕೃತಿ ಮೇಲೆ ಮನುಷ್ಯನ ದೌರ್ಜನ್ಯ ಹೆಚ್ಚಾದ ಪರಿಣಾಮ ಜಾಗತಿಕ ತಾಪಮಾನ ಹೆಚ್ಚಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ನಮ್ಮದಲ್ಲದ ವಸ್ತುವಿನ ಮೇಲೆ ನಾವೇ ದೌರ್ಜನ್ಯ ಮಾಡುವುದು ತಪ್ಪು ಎಂಬ ಬಗ್ಗೆ ಜಾಗೃತಿ ಅವಶ್ಯವಿದೆ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿದ ನಾರಿಶಕ್ತಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಪರಿಸರ ತಜ್ಞೆ ನೊಮಿಟೋ ಕಾಮದಾರ್‌ ಮಾತನಾಡಿ, ಹಿರಿಯರು ಉಳಿಸಿಕೊಟ್ಟಿರುವ ಪರಿಸರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆಯ ಮೇಲಿದೆ ಎಂದರು.

Advertisement

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ಕಾರವಾರ ಮತ್ತು ಅಂಕೋಲಾ ತಾಲೂಕಿನ ಪೌಢಶಾಲಾ ಮಟ್ಟದಲ್ಲಿ ಪ್ರತ್ಯೇಕವಾಗಿ ನಡೆಸಿದ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಹಾಗೂ ಚಿತ್ರ ರಚನಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ. ವಸಂತರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ| ಟಿ.ಗೋವಿಂದಯ್ಯ, ಜಿಲ್ಲಾ ಪೊಲೀಸ್‌ ಅಧೀಕ್ಷಕ ವಿನಾಯಕ ಪಾಟೀಲ್, ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಪ್ರದೇಶಿಕ ನಿರ್ದೇಶಕ ಪ್ರಸನ್ನ ಪಟಗಾರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ನಾಯ್ಕ, ಬಸವರಾಜ್‌, ಡಿಡಿಪಿಐ ಕೆ.ಮಂಜುನಾಥ್‌, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ವಿಜಯ ಹೆಗಡೆ ಉಪಸ್ಥಿತರಿದ್ದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್‌ ನಾವಿ ಪ್ರಾಸ್ತಾವಿಕ ಮಾತನಾಡಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಂಜುಂಡಪ್ಪ ಸ್ವಾಗತಿಸಿ, ವಲಯ ಅರಣ್ಯಾಧಿಕಾರಿ ರಾಘವೇಂದ್ರ ವಂದಿಸಿದರು. ಇದಕ್ಕೂ ಮುನ್ನಾ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ನಂತರ ಪರಿಸರ ಜಾಗೃತಿ ಜಾಥಾ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next