Advertisement
ದ.ಕ. ಜಿಲ್ಲೆಯ ಕೆಲವು ಗ್ರಾಮೀಣ ಭಾಗದ ರೈಲು ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಎತ್ತರಿಸುವ ಕಾಮಗಾರಿ ಆರಂಭಗೊಂಡಿದ್ದು ಶೀಘ್ರ ಅಂತಿಮಗೊಂಡು ಪ್ರಯಾಣಿಕರಿಗೆ ವರದಾನವಾಗಲಿದೆ.
ಜಿಲ್ಲೆಯ ಐದು ರೈಲು ನಿಲ್ದಾಣಗಳ ಪ್ಲಾಟ್‌ಫಾರ್ಮ್ ಎತ್ತರಿಸಲಾಗುತ್ತದೆ. ಕಡಬ ತಾಲೂಕಿನ ಕಡಬ ಸಮೀಪದ ಕೋಡಿಂಬಾಳ, ಬಜಕೆರೆ, ಎಡಮಂಗಲ, ಕಾಣಿಯೂರು, ನರಿಮೊಗರು ರೈಲು ನಿಲ್ದಾಣಗಳ ಪ್ಲಾಟ್ ಫಾರ್ಮ್ ಅನ್ನು ಎತ್ತರಿಸುವ ಕಾಮಗಾರಿ ಆರಂಭಗೊಂಡಿದೆ. ಸುಮಾರು 250 ಮೀಟರ್ ಉದ್ದ ಹಾಗೂ ನಿಯಮಿತ ಎತ್ತರಕ್ಕೆ ಪ್ಲಾಟ್‌ಫಾರ್ಮ್ ಅಭಿವೃದ್ಧಿ ಕೆಲಸ ನಡೆಯಲಿದೆ. ಜತೆಗೆ ಕುಡಿಯುವ ನೀರು, ಕುಳಿತುಕೊಳ್ಳಲು ಆಸನದ ವ್ಯವಸ್ಥೆನ್ನೂ ಕಲ್ಪಿಸಲಾಗುತ್ತದೆ. ಜತೆಗೆ ಅಗತ್ಯ ಅಭಿವೃದ್ಧಿ ಕೆಲಸಗಳು ನಡೆಯಲಿವೆ. ಒಟ್ಟು 4.50 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜೂನ್ ತಿಂಗಳ ಮೊದಲು ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಸಮಸ್ಯೆಯಾಗಿತ್ತು
ಮೀಟರ್ ಗೇಜ್‌ನಿಂದ ಬ್ರಾಡ್ ಗೇಜ್‌ಗೆ ರೈಲ್ವೇ ಹಳಿ ಪರಿವರ್ತನೆ ಯಾದ ಬಳಿಕ ಹಳಿ ಎತ್ತರವಾಗಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ಗೆ ಸಮವಾಗಿತ್ತು. ಆದರೆ ರೈಲ್ವೇ ಇಲಾಖೆ ಪ್ಲಾಟ್‌ಫಾರ್ಮ್ ಏರಿಸುವ ಕೆಲಸ ನಡೆಸದೇ ಪ್ರಯಾಣಿಕರು ರೈಲು ಹತ್ತಲು ಹಾಗೂ ಇಳಿಯಲು ಸಮಸ್ಯೆಯಾಗಿತಲ್ಲದೇ ಅಪಾಯ ಸಂಭವಿಸುವ ಸಾಧ್ಯತೆಯಿತ್ತು. ಈ ಸಮಸ್ಯೆ ಬಗೆಹರಿಸುವಂತೆ ಹಲವು ವರ್ಷಗಳಿಂದ ಇಲಾಖೆ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿತ್ತು.
Related Articles
ಮಂಗಳೂರು-ಬೆಂಗಳೂರು ನಡುವೆ ನಿತ್ಯ ಹಲವಾರು ರೈಲುಗಳು ಓಡಾಟ ನಡೆಸುತ್ತಿದ್ದರೂ ಸ್ಥಳೀಯರಿಗೆ ಇದರ ಪ್ರಯೋಜನ ಸಿಗುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ನೀಡಲಾಗುತ್ತಿಲ್ಲ. ಮಂಗಳೂರು -ಸುಬ್ರಹ್ಮಣ್ಯ ನಡುವೆ ಬೆಳಗ್ಗೆ, ಮಧ್ಯಾಹ್ನ, ಸಂಜೆ ಲೋಕಲ್ ರೈಲು ಸಂಚರಿಸಬೇಕೆಂಬ ಬೇಡಿಕೆಯೂ ಈಡೇರಿಲ್ಲ. ರೈಲು ನಿಲ್ದಾಣ ಅಭಿವೃದ್ಧಿಯ ಜತೆಗೆ ಜನತೆಯ ಬೇಡಿಕೆಗಳಿಗೂ ಸ್ಪಂದನೆ ಸಿಕ್ಕಿದಲ್ಲಿ ರೈಲು ಸೇವೆ ಸ್ಥಳೀಯರಿಗೂ ಪ್ರಯೋಜನ ವಾಗಲಿದೆ ಎಂಬುದು ಸ್ಥಳೀಯ ಜನರ ಅಭಿಪ್ರಾಯವಾಗಿದೆ.
Advertisement