Advertisement
ಜೆಡಿಎಸ್ ಭದ್ರಕೋಟೆ: ಗ್ರಾಮ ಪಂಚಾಯಿತಿ ಸದಸ್ಯರು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಜಿಲ್ಲೆಯ ಶಾಸಕರು, ಸಂಸದರು ಮತದಾನ ಮಾಡುವ ಹಕ್ಕು ಹೊಂದಿದ್ದಾರೆ. ಜಿಲ್ಲೆ ಜೆಡಿಎಸ್ ಭದ್ರಕೋಟೆಯಾಗಿದ್ದು, ಮೂವರು ವಿಧಾನ ಪರಿಷತ್ ಸದಸ್ಯರು ಸೇರಿದಂತೆ 9 ಮಂದಿ ಶಾಸಕರಿದ್ದಾರೆ. ಅಲ್ಲದೆ, ಗ್ರಾಪಂ, ನಗರಸಭೆ, ಪುರಸಭೆಗಳಲ್ಲಿ ತನ್ನದೇ ಆದ ಸದಸ್ಯರ ಸಂಖ್ಯೆ ಹೊಂದಿದೆ.
Related Articles
Advertisement
ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಡುವೆ ರಾಜಕೀಯ ಜಿದ್ದಾಜಿದ್ದಿ ನಡೆಯುತ್ತಿದೆ. ಯಾವುದೇ ವಿಚಾರ ಬಂದರೂ ಕೈ ಹಾಗೂ ದಳ ನಾಯಕರ ನಡುವೆ ಮಾತಿನ ಸಮರ, ತಿರುಗೇಟು, ವೈಯಕ್ತಿಕ ಟೀಕೆಗಳು ವ್ಯಕ್ತವಾಗುತ್ತವೆ. ಅದು ಈ ವಿಧಾನ ಪರಿಷತ್ ಚುನಾವಣೆಯಲ್ಲಿ ಮುಂದುವರಿಯುವ ಸಾಧ್ಯತೆ ಇದೆ.
ಇದನ್ನೂ ಓದಿ:- ವಿಜಯಪುರ: ಮೊಮ್ಮಗನ ಆಸ್ಪತ್ರೆಗೆ ನೇತ್ರದಾನ ಮಾಡಿದ ಅಜ್ಜಿ
ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿ ಎನ್.ಅಪ್ಪಾಜಿಗೌಡ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಲ್.ಆರ್.ಶಿವರಾಮೇಗೌಡ ನಡುವೆ ತೀವ್ರ ಪೈಪೋಟಿ ಎದುರಾಗಿತ್ತು. ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಒಬ್ಬ ಶಾಸಕರಿಲ್ಲ. ಅಲ್ಲದೆ, ನಗರಸಭೆ, ಪುರಸಭೆಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲು ವಿಫಲವಾಗಿದೆ. ಗ್ರಾಪಂ ಸದಸ್ಯರ ಮೇಲೆಯೇ ಕಾಂಗ್ರೆಸ್ ಅವಲಂಬಿತವಾಗಿದ್ದು, ಜೆಡಿಎಸ್‌ನಿಂದ ಸ್ಥಾನ ಕಸಿದುಕೊಳ್ಳಲಿದೆಯೇ ಕಾದು ನೋಡಬೇಕು.
ತ್ರಿಕೋನ ಸ್ಪರ್ಧೆ ಸಾಧ್ಯತೆ-
ಜಿಲ್ಲೆಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ. ಆದರೆ ಈ ಬಾರಿ ಬಿಜೆಪಿಯು ಪ್ರಬಲ ಟಕ್ಕರ್ ಕೊಡಲು ಸಜಾjಗಿದೆ. ಈಗಾಗಲೇ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಿರೀಕ್ಷೆ ಮೀರಿ ಬೆಂಬಲಿತ ಸದಸ್ಯರನ್ನು ಗೆಲ್ಲಿಸಿದ್ದು, ಕೆಲವು ಕಡೆ ಅ ಧಿಕಾರದ ಚುಕ್ಕಾಣಿ ಹಿಡಿದಿದೆ. ಅಲ್ಲದೆ, ಕೆ.ಆರ್.ಪೇಟೆ ಪುರಸಭೆಯ ಆಡಳಿತ ಮಂಡಳಿಯು ಕಮಲದ ವಶವಾಗಿದೆ. ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಪೈಪೋಟಿ ನೀಡಲು ಸಿದ್ಧತೆ ನಡೆಸಿದೆ. ಆ ಮೂಲಕ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.
“ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಗೆ ಈ ಬಾರಿಯೂ ಸ್ಪರ್ಧಿಸಲು ಮುಂದಾಗಿದ್ದೇನೆ. ಜೆಡಿಎಸ್ ವರಿಷ್ಠರು ಟಿಕೆಟ್ ನೀಡಿದರೆ ಚುನಾವಣೆಯಲ್ಲಿ ಸ್ಪ ರ್ಧಿಸುತ್ತೇನೆ. ಎಲ್ಲವೂ ವರಿಷ್ಠರ ತೀರ್ಮಾನ.” – ಎನ್.ಅಪ್ಪಾಜಿಗೌಡ, ಹಾಲಿ ವಿಧಾನ ಪರಿಷತ್ ಸದಸ್ಯ.
“ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಪಕ್ಷದ ನಾಯಕರು ಟಿಕೆಟ್ ನೀಡಿದರೆ ಸ್ಪರ್ಧಿಸಲಿದ್ದೇನೆ. ಆದರೆ ಇದುವರೆಗೂ ಟಿಕೆಟ್ ಫೈನಲ್ ಆಗಿಲ್ಲ. ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಲಿದೆ ಎಂಬುದು ಗೊತ್ತಿಲ್ಲ.” – ಬಿ.ರಾಮಕೃಷ್ಣ, ವಿಧಾನ ಪರಿಷತ್ ಮಾಜಿ ಸದಸ್ಯ.
“ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವರಿಷ್ಠರು ಈ ಬಾರಿ ನನಗೆ ಟಿಕೆಟ್ ನೀಡುವ ವಿಶ್ವಾಸವಿದ್ದು, ಜಿಲ್ಲೆಯಲ್ಲಿ ಮತ್ತೂಂದು ಕಮಲ ಅರಳಿಸಲು ಮುಂದಾಗಿದ್ದೇನೆ.” – ಬೂಕಹಳ್ಳಿ ಮಂಜುನಾಥ್, ಬಿಜೆಪಿ ಟಿಕೆಟ್ ಆಕಾಂಕ್ಷಿ.