ಮಡಿಕೇರಿ :ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕ, ಕದಳಿ ಮಹಿಳಾ ವೇದಿಕೆ ಕೊಡಗು, ಗ್ರಾಮ ಪಂಚಾಯತ್ , ಶ್ರೀ ಮಂಟಿಗಮ್ಮ ಸೇವಸ್ಥಾನ ಸಮಿತಿ, ಅಕ್ಕಮಹಾದೇವಿ ಮಹಿಳಾ ಸಮಾಜ, ಸ್ತ್ರೀಶಕ್ತಿ ಸಂಘಗಳ ಸಂಯುಕ್ತಾಶ್ರಯದಲ್ಲಿ ಶಿರಂಗಾಲ ಉಮಾಮಹೇಶ್ವರ ದೇವಸ್ಥಾನದ ಆವವರಣದಲ್ಲಿ ಶನಿವಾರ ಜಿಲ್ಲಾಮಟ್ಟದ ಸ್ತ್ರೀ ಅಸ್ಮಿತೆ ಮತ್ತು ವಚನ ಕ್ರಾಂತಿ ಚಿಂತನಾ ಗೋಷ್ಠಿ ಕಾರ್ಯಕ್ರಮವನ್ನು ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಸವಾಪಟ್ಟಣದ ತೋಂಟದಾರ್ಯ ಸಂಸ್ಥಾನ ಮಠದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಮಹಿಳೆಯರು ಸಾಮಾಜಿಕ ಜವಬ್ದಾರಿಯನ್ನು ಅರಿತು ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಸನಾತನ ಧರ್ಮವನ್ನು ತಮ್ಮ ಜೀವನದಲ್ಲಿ ಪಾಲಿಸುವ ಮೂಲಕ ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಸಲಹೆ ನೀಡಿದರು.
ಕೊಡ್ಲಿಪೇಟೆ ಕಿರಿಕೊಡ್ಲಿ ಮಠದOಛksv ಸದಾಶಿವ ಸ್ವಾಮೀಜಿ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಿ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಮಹಿಳೆಯರು ತಮ್ಮ ಸಂಸಾರದ ಹೊಣೆಯನ್ನು ಸಂಪೂರ್ಣವಾಗಿ ನಿಭಾಯಿಸುತ್ತಿದ್ದರೂ ಅವರ ಬೇಡಿಕೆ ಮನ್ನಣೆ ದೊರೆಯುತ್ತಿಲ್ಲ ಎಂದರು. ಸಮಾಜದಲ್ಲಿ ಸತಪತಿಗಳು ಕೂಡಿ ಬಾಳಿದರೆ ಅದುವೇ ಸ್ವರ್ಗ ಸುಃಖ ಎಂಬುದನ್ನು ಪ್ರತಿಯೊಬ್ಬ ಪುರುಷರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು. ಶಿರಂಗಾಲ ಶ್ರೀ ಮಂಟಿಗಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಎಸ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಕುಮುದಾಧರ್ಮಪ್ಪ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್.ಮಹೇಶ್, ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಮಹಾದೇವಪ್ಪ, ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಲೇಖನಾ ಧರ್ಮೇಂದ್ರ, ತಾಲ್ಲೂಕು ವೀರಶೈವ ಸಮಾಹದ ಅಧ್ಯಕ್ಷ ಶನಿವಾರಸಂತೆಯ ಕೆ.ಬಿ.ಹಾಲಪ್ಪ ಅಕ್ಕಮಹಾದೇವಿ ಮಹಿಳಾ ಸಮಾಜದ ಅಧ್ಯಕ್ಷೆ ಪಾರ್ವತಮ್ಮ , ಕುಶಾಲನಗರ ಪತ್ರಕರ್ತರ ಸಂಘದ ಅಧ್ಯಕ್ಷ ರಘುಹೆಬ್ಟಾಲೆ, ಗ್ರಾ.ಪಂ.ಅಧ್ಯಕ್ಷ ಎನ್.ಎಸ್.ರಮೇಶ್, ದೇವಸ್ಥಾನ ಸಮಿತಿ ಕಾರ್ಯದರ್ಶಿ ಸಿ.ಎನ್.ಲೋಕೇಶ್ ಉಪಸ್ಥಿತರಿದ್ದರು. ಮಹೇಶ್ ಸ್ವಾಗತಿಸಿದರು. ನಿರ್ಮಾಲಶಿವಲಿಂಗ ವಂದಿಸಿದರು. ಶಿಕ್ಷಕಿ ಎಂ.ಪಿ.ಲಿಯೋನಾ ನಿರೂಪಿಸಿದರು.