Advertisement

Playback singer ಅನುರಾಧಾ ಪೌದ್ವಾಲ್ ಬಿಜೆಪಿ ಸೇರ್ಪಡೆ

04:46 PM Mar 16, 2024 | Team Udayavani |

ಹೊಸದಿಲ್ಲಿ: ಖ್ಯಾತ ಬಾಲಿವುಡ್ ಗಾಯಕಿ ಅನುರಾಧಾ ಪೌದ್ವಾಲ್ ಲೋಕಸಭೆ ಚುನಾವಣೆಗೂ ಮುನ್ನ ಶನಿವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

Advertisement

ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಮುಖಂಡರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೌದ್ವಾಲ್, ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಯನ್ನು ಹಾಡಿ ಹೊಗಳಿದರು. ಮೋದಿ ನೇತೃತ್ವದ ಪಕ್ಷಕ್ಕೆ ಸೇರಲು ನನಗೆ ಸಂತೋಷವಾಗುತ್ತಿದೆ ಎಂದರು.

ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ 69 ರ ಹರೆಯದ ಪ್ರಸಿದ್ಧ ಹಿನ್ನೆಲೆ ಗಾಯಕಿ ಅನುರಾಧಾ ಪೌದ್ವಾಲ್ ಪಕ್ಷ ಸೇರ್ಪಡೆ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಮುಖ್ಯ ವಕ್ತಾರ ಅನಿಲ್ ಬಲುನಿ ಸೇರಿದಂತೆ ಅದರ ಹಿರಿಯ ನಾಯಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next