Advertisement
ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, “ವೀರಣ್ಣಪಾಳ್ಯದಿಂದ ಹೆಬ್ಟಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಬಿಬಿಎಂಪಿ ಆಯುಕ್ತರು ಅಥವಾ ಬಿಎಂಆರ್‌ಸಿಎಲ್ ಎಂಡಿ ಯಾರಾದರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ತಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ’ ಎಂದು ಕೋರಿಕೊಂಡಿದ್ದಾರೆ.
Related Articles
Advertisement
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ರಸ್ತೆ ಗುಂಡಿಗಳು ಕುರಿತಂತೆ ಸಚಿವ ಕೃಷ್ಣಬೈರೇಗೌಡ ಅವರ ಟ್ವೀಟ್ ಅಸ್ತ್ರವಾಗಿರಿಸಿಕೊಂಡು ಇದೀಗ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಜತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಚಿವರ ಮಧ್ಯೆ ಪರಸ್ಪರ ತಾಳಮೇಳವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಸರ್ಕಾರದಲ್ಲಿ ಏನಾಗುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಈ ಬಗ್ಗೆ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಕಂದಾಯ ಸಚಿವರು ಮತ್ತು ಬ್ಯಾಟರಾಯನಪುರ ಶಾಸಕರಾದ ಕೃಷ್ಣಬೈರೇಗೌಡರು ಅತ್ಯಂತ ಅಸಹಾಯಕರಾಗಿ ಬಿಬಿಎಂಪಿ ಮತ್ತು ಬಿಎಂಆರ್‌ಸಿಎಲ್ ಅಧಿಕಾರಿಗಳಿಗೆ ರಸ್ತೆ ಗುಂಡಿ ಮುಚ್ಚುವಂತೆ ಸಾಮಾಜಿಕ ಜಾಲತಾಣದಲ್ಲಿ ಬೇಡಿಕೊಳ್ಳುವುತ್ತಿರುವುದನ್ನು ನೋಡಿದರೆ ಕರ್ನಾಟದಲ್ಲಿರುವ ಕಾಂಗ್ರೆಸ್ ಸರ್ಕಾರ ಎಂತಹ ನಾಲಾಯಕ್ ಸರ್ಕಾರ ಎಂಬುದು ಸ್ಪಷ್ಟವಾಗುತ್ತದೆ ಎಂದು ಕಿಡಿಕಾರಿದ್ದಾರೆ.
ಸಚಿವ ಕೃಷ್ಣಬೈರೇಗೌಡ ಅವರೇ, ಆದೇಶ ಮಾಡಿ ಕೆಲಸ ಮಾಡಿಸಬೇಕಾದ ಸ್ಥಾನದಲ್ಲಿರುವ ತಾವು ಬಿಬಿಎಂಪಿ ಅಧಿಕಾರಿಗಳಿಗೆ ಇಷ್ಟೊಂದು ಅಸಹಾಯಕರಾಗಿ ಅಂಗಲಾಚುತ್ತಿದ್ದೀರಲ್ಲ, ಬೆಂಗಳೂರು ಅಭಿವೃದ್ಧಿ ಸಚಿವರು ತಮ್ಮ ಕೆಲಸ ಮಾಡುತ್ತಿಲ್ಲ ಎಂದು ಪರೋಕ್ಷವಾಗಿ ಟಾಂಗ್ ಕೊಡುತ್ತಿದ್ದೀರೋ? ಅಥವಾ ಇದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬಹಿರಂಗ ಬಂಡಾಯದ ಮುನ್ಸೂಚನೆಯೋ ಎಂದು ಕಾಲೆಳೆದಿದ್ದಾರೆ.