ಮೈಸೂರು: ಇಲ್ಲಿನ ಬಸ್ ನಿಲ್ದಾಣದ ಗುಂಬಜ್ ವಿವಾದ ದಿನಕ್ಕೊಂದು ರೂಪ ಪಡೆಯುತ್ತಿದೆ. ಇದೀಗ ಶಾಸಕ ಎಸ್ ಎ ರಾಮದಾಸ್ ಅವರು, ‘ನನ್ನನ್ನು ದಯಮಾಡಿ, ಬಿಟ್ಟು ಬಿಡಿ’ ಎಂದು ಕೈ ಮುಗಿದು ಕೇಳಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,” ನಾನು ಈ ವಿಚಾರದಲ್ಲಿ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಲಿ. ನಷ್ಟದ ಹಣವನ್ನು ನನ್ನ ಸಂಬಳದಿಂದ ಭರಿಸುತ್ತೇನೆ” ಎಂದು ಪರೋಕ್ಷವಾಗಿ ಸ್ವಪಕ್ಷದ ಸಂಸದ ಪ್ರತಾಪ್ ಸಿಂಹ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ:ಅಡಿಲೇಡ್ ನಲ್ಲಿ ಆ್ಯಶ್ಟನ್ ಆ್ಯಗರ್ ಸೂಪರ್ ಮ್ಯಾನ್ ಫೀಲ್ಡಿಂಗ್: ಇಲ್ಲಿದೆ ವಿಡಿಯೋ
ಬಿಜೆಪಿಯ 11 ಜನ ಶಾಸಕರು ಇದ್ದರು. ಕಿರುಕುಳ ನೀಡಿ 10 ಜನ ಬೇರೆ ಪಕ್ಷಕ್ಕೆ ಹೊರಟು ಹೋದರು. ಉಳಿದಿರುವವನು ನಾನೊಬ್ಬನೆ. ದಯಮಾಡಿ ನನ್ನನ್ನು ಬಿಟ್ಟು ಬಿಡಿ. ಏನೂ ಪ್ರಶ್ನೆ ಕೇಳಬೇಡಿ ಎಂದು ಕೈ ಮುಗಿದು ಬೇಡಿಕೊಂಡರು.
Related Articles
ನಾನು ಅಭಿವೃದ್ಧಿ ಬಗ್ಗೆ ಮಾತ್ರ ಚಿಂತನೆ ಮಾಡುತ್ತೇನೆ. ಪಾರ್ಕ್, ಸ್ಮಶಾನ ಅಭಿವೃದ್ಧಿ ನನ್ನ ಕನಸು. ಸಾಯುವ ಮುನ್ನ ಸಾಧನೆ ಮಾಡಬೇಕು ಎನ್ನುವುದೇ ನನ್ನ ಗುರಿ. ಈ ಬಗ್ಗೆ ಸಿಎಂ ಹಾಗೂ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ್ದೇನೆ. ಸಮಿತಿ ರಚಿಸಲು ಮನವಿ ಮಾಡಿದ್ದೇನೆ. ಸಮಿತಿ ಯಾವುದೇ ವರದಿ ಕೊಟ್ಟರೂ ಅದಕ್ಕೆ ಬದ್ದ ಎಂದರು.