ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ರೈಲ್ವೆ ನಿಲ್ದಾಣದ ಸಮೀಪ ಸ್ಫೋಟಕ ತುಂಬಿದ್ದ ಬ್ಯಾಗ್ ಹಾಗೂ 18 ಡಿಟೋನೇಟರ್ ಗಳನ್ನು ಪೊಲೀಸರು ಪತ್ತೆ ಹಚ್ಚುವ ಮೂಲಕ ಭಾರೀ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮಲ್ಪೆ: ಸೇತುವೆ ಮೇಲೆ ಸ್ಕೂಟರ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
ಜಮ್ಮು ರೈಲ್ವೆ ನಿಲ್ದಾಣದ ಸಮೀಪ ಸ್ಫೋಟಕ ತುಂಬಿದ್ದ ಬ್ಯಾಗ್ ಅನ್ನು ವಶಕ್ಕೆ ಪಡೆದಿದ್ದು, ಎರಡು ಬಾಕ್ಸ್ ಗಳಲ್ಲಿ ಸ್ಫೋಟಕ ಹಾಗೂ ಅದಕ್ಕೆ ಸಂಬಂಧಿಸಿದ ಉಪಕರಣಗಳು ಇದ್ದಿರುವುದಾಗಿ ಎಸ್ ಎಸ್ ಪಿ ಅರಿಫ್ ರಿಶು ತಿಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಜಮ್ಮು ರೈಲ್ವೆ ನಿಲ್ದಾಣದಲ್ಲಿ ಸ್ಫೋಟಕವನ್ನು ಅಳವಡಿಸಿ, ಸ್ಫೋಟಿಸುವ ಸಂಚು ರೂಪಿಸಲಾಗಿತ್ತು ಎಂದು ತಿಳಿಸಿದ್ದು, ಈ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಿರುವುದಾಗಿ ವರದಿ ವಿವರಿಸಿದೆ.
Related Articles
ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ ಎಂದು ವರದಿ ತಿಳಿಸಿದೆ.