Advertisement

ಪ್ರಧಾನಿಯಿಂದ ನಾಳೆ ಆರ್ಥಿಕ ಪ್ಯಾಕೇಜ್‌ ಪ್ರಕಟ?

06:05 AM Sep 24, 2017 | Team Udayavani |

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸೋಮವಾರ ನಡೆಯಲಿದೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ 40 ಸಾವಿರದಿಂದ 50 ಸಾವಿರ ಕೋಟಿ ರೂ.ಮೌಲ್ಯದ ಆರ್ಥಿಕ ಪ್ಯಾಕೇಜ್‌ ಘೋಷಣೆ ಮಾಡುವ ಸಾಧ್ಯತೆಗಳಿವೆ.

Advertisement

ಗೃಹ ನಿರ್ಮಾಣ ಮತ್ತು ಇಂಧನ ಕ್ಷೇತ್ರಗಳನ್ನು ಗುರಿಯಾಗಿರಿಸಿಕೊಂಡು ಅದು ಘೋಷಣೆಯಾಗುವ ಸಾಧ್ಯತೆಗಳಿವೆ. ಅದೇ ದಿನ ಬಿಜೆಪಿ ಸಂಸ್ಥಾಪಕ ದೀನ್‌ ದಯಾಳ್‌ ಉಪಾಧ್ಯಾಯ ಅವರ ಶತಮಾನೋತ್ಸವ ದಿನವೂ ಆಗಿದೆ. 2019ರ ಒಳಗಾಗಿ ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನೂ ಕೈಗೊಳ್ಳುತ್ತಿದೆ. ಸುಮಾರು 1,400 ಮಂದಿ ಶಾಸಕರು, 337 ಎಂಪಿಗಳು ಮತ್ತು ಎಂಎಲ್‌ಸಿಗಳು, 2 ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next