ಹೊಸದಿಲ್ಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮೌನ ವಹಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ವಾಗ್ದಾಳಿ ನಡೆಸಿದ್ದು, ಅವರು ರಾಜ್ಯದ ಜನತೆಗೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಮೋದಿಯವರ ಮೌನ ಅಲ್ಲಿನ ಜನರ ಗಾಯದ ಮೇಲೆ ಉಪ್ಪು ಸವರಿದಂತಿದೆ ಎಂದ ಖರ್ಗೆ, ಪ್ರಧಾನಿಯವರು ಮಾಡಬಹುದಾದ ಕನಿಷ್ಠ ಕೆಲಸವೆಂದರೆ ಶಾಂತಿಗಾಗಿ ಮನವಿ ಮಾಡುವುದಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : Manipur ಶಾಂತಿ ಸ್ಥಾಪನೆಗೆ ಹರಸಾಹಸ: ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸಮಿತಿ
“ನರೇಂದ್ರ ಮೋದಿ ಜೀ, 3 ಮೇ 2023 – ಮಣಿಪುರದಲ್ಲಿ ಮೊದಲು ಹಿಂಸಾಚಾರ ಭುಗಿಲೆದ್ದಿತು. ನೀವು ಕೇಂದ್ರ ಗೃಹ ಸಚಿವರನ್ನು ರಾಜ್ಯಕ್ಕೆ ಕಳುಹಿಸಲು ಸುಮಾರು ಒಂದು ತಿಂಗಳು ಬೇಕಾಯಿತು. ಗೃಹ ಸಚಿವರ ನಿರ್ಗಮನದ 8 ದಿನಗಳ ನಂತರ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದೆ.ಈಶಾನ್ಯ ಭಾರತದ ‘ಆಕ್ಟ್ ಈಸ್ಟ್’ ನೀತಿಯ ಪ್ರತಿಪಾದಕರಿಗೆ, ಮಣಿಪುರದಲ್ಲಿ ಹಿಂಸಾಚಾರದ ಬಗ್ಗೆ ನಿಮ್ಮ ಮೌನವು ಅಲ್ಲಿನ ಜನರ ಗಾಯಗಳಿಗೆ ಉಪ್ಪು ಸವರಿದೆ ಎಂದು ಎಐಸಿಸಿ ಅಧ್ಯಕ್ಷ ಆಕ್ರೋಶ ಹೊರ ಹಾಕಿದ್ದಾರೆ.