Advertisement

ಕೋವಿಡ್ ನಿಯಂತ್ರಣ ಸಂಬಂಧ ರಾಜ್ಯಗಳ‌ ಜತೆ ಪ್ರಧಾನಿ ಸಭೆ

03:28 PM Dec 23, 2021 | Team Udayavani |

ನವದೆಹಲಿ: ಕೋವಿಡ್ ನಿಯಂತ್ರಣ ಪ್ರಕ್ರಿಯೆಗಳ ಬಗ್ಗೆ ಚರ್ಚಿಸುವುದಕ್ಕಾಗಿ ಪ್ರಧಾನಿ‌ ನರೇಂದ್ರ ಮೋದಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಜತೆಗೆ ಗುರುವಾರ ಸಂಜೆ ಮಹತ್ವದ ಸಭೆ ನಡೆಸಲಿದ್ದಾರೆ.

Advertisement

ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಪುನರ್ ಪರಿಶೀಲನೆಗಾಗಿ ಈ ಸಭೆ ನಡೆಸಲಾಗುವುದು ಎಂದು‌ ಪ್ರಧಾನಿ ಕಾರ್ಯಾಲಯದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ದೇಶದಲ್ಲಿ ಇದುವರೆಗೆ 236 ಒಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, 104 ಜನರು ಗುಣಮುಖರಾಗಿದ್ದಾರೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಕಳುಹಿಸಿರುವ ಮಾಹಿತಿ ಪ್ರಕಾರ, ಡೆಲ್ಟಾಗಿಂತಲೂ ಒಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ. ಈ ಹಿನ್ನೆಲೆಯಲ್ಲಿ ಮತ್ತೆ ವಾರ್ ರೂಂ ಆರಂಭಿಸುವುದು ಸೇರಿದಂತೆ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕೇಂದ್ರ ಸೂಚಿಸಿದೆ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next