ಬೆಂಗಳೂರು: ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು 10 ರಾಜ್ಯಗಳ ಸಿಎಂಗಳ ಜೊತೆ ಸಭೆ ಕರೆದಿದ್ದಾರೆ.
ನಾಳೆ ( ಏಪ್ರಿಲ್ 23, ಶುಕ್ರವಾರ) ಬೆಳಿಗ್ಗೆ 10 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ.
ಕಳೆದರೆಡು ದಿನಗಳ ಹಿಂದೆಯಷ್ಟೇ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕೋವಿಡ್ ವಿರುದ್ಧ ಹೋರಾಟಕ್ಕೆ ಸಹಕರಿಸುವಂತೆ ದೇಶದ ಜನತೆಯನ್ನು ಕೇಳಿಕೊಂಡಿದ್ದರು. ಹಾಗೂ ಲಾಕ್ ಡೌನ್ ಕೊನೆಯ ಅಸ್ತ್ರವಾಗಬೇಕೆಂದು ರಾಜ್ಯ ಸರ್ಕಾರಗಳಿಗೆ ತಿಳಿಸಿದ್ದರು.
ಇನ್ನು ದೇಶದಲ್ಲಿ ಕೋವಿಡ್ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 3 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.
Related Articles