Advertisement

PM Meets Paris Olympians: ಪ್ರಧಾನಿ ಮೋದಿ ಭೇಟಿಯಾದ ಒಲಿಂಪಿಕ್ಸ್‌ ಪದಕ ವಿಜೇತರು

06:37 PM Aug 15, 2024 | Team Udayavani |

ಹೊಸದಿಲ್ಲಿ: ಪ್ಯಾರಿಸ್ ಒಲಿಂಪಿಕ್ಸ್‌ 2024 ಕ್ರೀಡಾಕೂಟದಲ್ಲಿ ಭಾಗಿಯಾಗಿ ತವರಿಗೆ ಆಗಮಿಸಿರುವ ಪದಕ ವಿಜೇತ ಸ್ಪರ್ಧಿಗಳಿಗೆ ಅದ್ಧೂರಿ ಸ್ವಾಗತ ಕೋರಿದ್ದು, ದಿಲ್ಲಿಯ ಕೆಂಪು ಕೋಟೆಯಲ್ಲಿ ಗುರುವಾರ ಜರುಗಿದ ಸ್ವಾತಂತ್ರ್ಯೋತ್ಸವದಲ್ಲಿ ಗಣ್ಯರ ಸಾಲಿನಲ್ಲಿ ಕೂರುವ ಅವಕಾಶ ಪಡೆದ ಒಲಿಂಪಿಕ್ಸ್‌ ಪದಕ ವಿಜೇತರು ಬಳಿಕ ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿಯವರ ಭೇಟಿಯಾಗಿ ಗೌರವ ಸ್ವೀಕರಿಸಿದರು.

Advertisement

ಪ್ರಧಾನಿಗೆ ಜೆರ್ಸಿ, ಹಾಕಿ ಸ್ಟಿಕ್‌ ಉಡುಗೊರೆ:  

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಒಲಿಂಪಿಕ್ಸ್ ಪದಕ ವಿಜೇತ ಸ್ಪರ್ಧಿಗಳ ದೆಹಲಿಯ ತಮ್ಮ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಹಾಕಿ ತಂಡವನ್ನು ಭೇಟಿಯಾಗಿದ್ದಾರೆ. ಈ ವೇಳೆ ಆಟಗಾರರು ಪ್ರಧಾನಿಗೆ ತಮ್ಮ ಪದಕಗಳ ತೋರಿಸಿ ಜೊತೆಗೆ ಹಾಕಿ ಸ್ಟಿಕ್ ಹಾಗೂ ಆಟಗಾರರು ಸಹಿ ಮಾಡಿರುವ ಜೆರ್ಸಿಯ ಪ್ರಧಾನಿಗೆ ಉಡುಗೊರೆಯಾಗಿ ನೀಡಿದ್ದಾರೆ. ಬಳಿಕ ಒಲಿಂಪಿಕ್ಸ್‌ನ ಶೂಟಿಂಗ್‌ ವಿಭಾಗದಲ್ಲಿ ಎರಡು ಕಂಚಿನ ಪದಕಗಳ ಗೆದ್ದ ಮನು ಭಾಕರ್, ಮೋದಿಯವರಿಗೆ ಒಲಿಂಪಿಕ್ಸ್‌ನಲ್ಲಿ ಬಳಸಿದ  ಪಿಸ್ತೂಲ್ ತೋರಿಸಿ ವಿವರಣೆ ನೀಡಿದ್ದಾರೆ. ಈ ವೇಳೆಯೇ  ಸರಬ್ಜೋತ್‌ ಸಿಂಗ್‌, ಅಮನ್ ಸೆಹ್ರಾವತ್ ಮತ್ತು ಸ್ವಪ್ನಿಲ್ ಕುಸಾಲೆಯವರು ಕೂಡ ಪ್ರಧಾನಿ ಮೋದಿಯವರ ಭೇಟಿಯಾಗಿ ಪದಕ ತೋರಿಸಿದರು.

ಕೇಂದ್ರ ಸರಕಾರದಿಂದ ಕ್ರೀಡೆಗೆ ಪ್ರೋತ್ಸಾಹ: ಪ್ರಧಾನಿ
ಪ್ಯಾರಿಸ್  ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಅಭಿನಂದಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ  ” ಪ್ಯಾರಿಸ್‌ ಒಲಿಂಪಿಕ್ಸ್‌ಗೆ ತೆರಳಿದ ಪ್ರತಿಯೊಬ್ಬ ಆಟಗಾರರು ಕೂಡ ಚಾಂಪಿಯನ್‌. ಕೇಂದ್ರ ಸರಕಾರದಿಂದ ಕ್ರೀಡೆಗೆ ನಿರಂತರ ಪ್ರೋತ್ಸಾಹ ಹಾಗೂ ಕ್ರೀಡೆಯಲ್ಲಿ ಉನ್ನತ ಗುಣಮಟ್ಟದ ಮೂಲ ಸೌಕರ್ಯ ಒದಗಿಸುವ ಭರವಸೆ ನೀಡಿದರು.

Advertisement


ಟೋಕಿಯೊ ಒಲಿಂಪಿಕ್ಸ್​ಗೆ ಹೋಲಿಸಿದರೆ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರದರ್ಶನ ಸ್ವಲ್ಪ ಕೆಳಮಟ್ಟದಲ್ಲಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಒಂದು ಬೆಳ್ಳಿ ಸೇರಿದಂತೆ ಆರು ಪದಕಗಳನ್ನು ಗೆದ್ದಿತ್ತು. ಶೂಟರ್ ಮನು ಭಾಕರ್ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚಿನ ಪದಕ ಮತ್ತು ನಂತರ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಅವರೊಂದಿಗೆ ಕಂಚಿನ ಪದಕ ಗೆದ್ದರು. ಸ್ವಾತಂತ್ರ್ಯದ ನಂತರ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಇತಿಹಾಸ ನಿರ್ಮಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next