ನವದೆಹಲಿ: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪ ಗುರುವಾರ (ಆಗಸ್ಟ್ 25) ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಕುಟುಂಬದ ಸದಸ್ಯರಿಗೆ ಮತ್ತು ಗಾಯಗೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಘೋಷಿಸಿದ್ದಾರೆ.
ಇದನ್ನೂ ಓದಿ:ಅಕ್ರಮ ಗಣಿಗಾರಿಕೆ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಜಾರ್ಖಂಡ್ ಸಿಎಂ ಸೊರೇನ್ ಆಪ್ತನ ಬಂಧನ
ಇಂದು ಮುಂಜಾನೆ ಶಿರಾ ಸಮೀಪದ ಕಳ್ಳಂಬೆಳ್ಳದಲ್ಲಿ ಟೆಂಪೋ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದ ಸುದ್ದಿ ತಿಳಿದು ಆಘಾತವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸುವುದಾಗಿ” ತಿಳಿಸಿದ್ದಾರೆ.
Related Articles
ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರೆಗೆ ತಲಾ 50 ಸಾವಿರ ರೂಪಾಯಿ ಘೋಷಿಸಿದ್ದಾರೆ. ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಈ ನೆರವು ಘೋಷಿಸಲಾಗಿದೆ.