Advertisement

ಮಾಜಿ ಪ್ರಧಾನಿಗಳಿಗೆ ಸಂಬಂಧಿಸಿದ ವಸ್ತು ನೀಡಿ

01:50 AM Jul 25, 2019 | Team Udayavani |

ನವದೆಹಲಿ: ದೇಶದ ಎಲ್ಲ ಪ್ರಧಾನಿಗಳ ನೆನಪಿಗಾಗಿ ಮ್ಯೂಸಿಯಂ ಸ್ಥಾಪಿಸಲಾಗುತ್ತಿದ್ದು, ಇದರಲ್ಲಿ ಪ್ರದರ್ಶಿಸುವುದಕ್ಕಾಗಿ ಪ್ರಧಾನಿಗಳಿಗೆ ಸಂಬಂಧಿಸಿದ ವಸ್ತುಗಳನ್ನು ಅವರ ಕುಟುಂಬದವರು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ಈ ಹಿಂದಿನ ಎಲ್ಲ ಪ್ರಧಾನಿಗಳನ್ನು ನೆನಪಿನಿಂದ ಮರೆ ಮಾಚಲು ಕಾರ್ಯತಂತ್ರ ರೂಪಿಸಿದೆ. ಆದರೆ ನಾವು ಎಲ್ಲರನ್ನೂ ನೆನಪಿಸಲು ನಿರ್ಧರಿಸಿದ್ದೇವೆ ಪ್ರಧಾನಿ ಮೋದಿ ಹೇಳಿದ್ದಾರೆ. ರಾಜ್ಯಸಭೆ ಉಪಸಭಾಪತಿ ಹರಿವಂಶ ಅವರು ಮಾಜಿ ಪ್ರಧಾನಿ ಚಂದ್ರಶೇಖರ್‌ ಕುರಿತು ಬರೆದ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ. ದೆಹಲಿಯಲ್ಲಿ ಈ ಮ್ಯೂಸಿಯಂ ನಿರ್ಮಾಣ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಮ್ಯೂಸಿಯಂ ಇರುವ ಪ್ರದೇಶದಲ್ಲೇ ಇದನ್ನು ನಿರ್ಮಿಸಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next