Advertisement

ಅಮೇರಿಕಾ ಪ್ರವಾಸದಿಂದ ಭಾರತಕ್ಕೆ ವಾಪಸ್ಸಾದ ಪ್ರಧಾನಿ ಮೋದಿ

09:44 AM Sep 29, 2019 | Team Udayavani |

ನವದೆಹಲಿ: ಒಂದು ವಾರದ ಅಮೇರಿಕಾ ಪ್ರವಾಸ ಮುಕ್ತಾಯಗೊಳಿಸಿದ ಶನಿವಾರ ಭಾರತಕ್ಕೆ ವಾಪಸ್ಸಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಆದರದ ಸ್ವಾಗತ ನೀಡಲಾಯಿತು.

Advertisement

ಪ್ರಧಾನಿ ಮೋದಿಯವರನ್ನು ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಮುಖಂಡರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊ೦ಡರು.

ತವರಿಗೆ ಆಗಮಿಸಿದ ಪ್ರಧಾನಿಯವರನ್ನು ಸ್ವಾಗತಿಸಲು ಪಾಲಂ ವಿಮಾನ ನಿಲ್ದಾಣದ ಬಳಿ ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದರು.

ವಿಮಾನ ನಿಲ್ದಾಣದ ಮುಖ್ಯ ರಸ್ತೆಗಳಲ್ಲಿ ಪ್ರಧಾನಿ ಮೋದಿಯವರು ವಿಶ್ವಸಂಸ್ಥೆಯಲ್ಲಿ ಮಾಡಿರುವ ಭಾಷಣವನ್ನು ಉಲ್ಲೇಖಿಸಿದ ಬ್ರಹತ್ ಬ್ಯಾನರ್ ಗಳನ್ನು ಹಾಕಲಾಗಿತ್ತು.

ಬಿಜೆಪಿ ಪ್ರಕಾರ ವಿಮಾನ ನಿಲ್ದಾಣದಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಜನರು ಜಮಾಯಿಸಿದ್ದರು ಎನ್ನಲಾಗಿದೆ.

Advertisement

ಪ್ರಧಾನಿ ಮೋದಿ ವಿಶ್ವಸಂಸ್ಥೆ 74 ನೇ ಸಾಮಾನ್ಯ ಸಭೆ ಅಧಿವೇಶನದಲ್ಲಿ ಹವಾಮಾನ ಬದಲಾವಣೆ, ಭಯೋತ್ಪಾಧನೆ ನಿಯಂತ್ರಣ, ಒಳಗೊಳ್ಳುವಿಕೆ ಅಭಿವೃದ್ದಿ ಕುರಿತಾಗಿ ಭಾಷಣ ಮಾಡಿ ಗಮನ ಸೆಳೆದಿದ್ದರು.

ದೇಶದ ಜನತೆಗೆ ನವರಾತ್ರಿ ಹಬ್ಬದ ಶುಭಾಶಯಗಳು
ದೆಹಲಿಯ ಪಾಲಂ ಏರ್ ಬೇಸ್ ನಲ್ಲಿ ಪ್ರಧಾನಿಯವರನ್ನು ಅದ್ದೂರಿಯಾಗಿ ಸ್ವಾಗತಿಸಿದ ಸಾವಿರಾರು ಬಿಜೆಪಿ ಕಾರ್ಯಕರ್ತರು ನಂತರ ಕಾರ್ಯಕರ್ತರು ಆಯೋಜಿಸಿದ್ದ ಸುಮಾರು ೨೦೦೦೦ ಕಾರ್ಯಕರತರಿಂದ ಎರಡು ಕಿಲೋಮೀಟರ್ ರೋಡ್ ಶೋ ನಡೆಯಿತು ಬಳಿಕ ಪಾಲಂ ಏರ್ ಬೇಸ್ ಬಳಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ವಿಶ್ವದಲ್ಲಿ ದೇಶವನ್ನು ನೋಡುವ ದೃಷ್ಟಿಕೋನ ಬದಲಾಗಿದೆ, ಅಮೇರಿಕಾದಲ್ಲಿ ಹೌಡಿ ಮೋದಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಇದಕ್ಕೆ ಸಹಕರಿಸಿದ ಎಲ್ಲರಿಗೂ ನನ್ನ ಧನ್ಯವಾದ ಹಾಗೂ ದೇಶದ ೧.೩ ಬಿಲಿಯನ್ ಜನರಿಗೂ ನನ್ನ ಧನ್ಯವಾದಗಳು ಎಂದು ತಿಳಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next