Advertisement
ಇದು ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ನೀಡಿದ ಕರೆ.
Related Articles
Advertisement
ಮೋದಿ ಸಲಹೆಗಳೇನು?– ದೇಶದ ಅಭಿವೃದ್ಧಿಗೆ ಪಣತೊಟ್ಟು “ಅಮೃತ ಕಾಲ’ವನ್ನು “ಕರ್ತವ್ಯ ಕಾಲ’ವಾಗಿ ರೂಪಿಸಿ.
– ಸಮಾಜದ ಪ್ರತಿಯೊಂದು ವರ್ಗವನ್ನೂ ತಲುಪಿ. ಆದರೆ ಅತಿಯಾದ ಆತ್ಮವಿಶ್ವಾಸ ಬೇಡ.
– ಬಿಜೆಪಿ ಈಗ ಕೇವಲ ರಾಜಕೀಯ ಚಳವಳಿಯಲ್ಲ, ಅದೊಂದು ಸಾಮಾಜಿಕ ಚಳವಳಿ
– 18-25ರ ವಯೋಮಾನದವರಿಗೆ ಹಿಂದಿನ ಸರ್ಕಾರಗಳ ಭ್ರಷ್ಟಾಚಾರ, ದುರಾಡಳಿತದ ಬಗ್ಗೆ ಗೊತ್ತಿಲ್ಲ
– ಅವರಿಗೆ ಈ ಕುರಿತು ಮಾಹಿತಿ ನೀಡುವ, ಜಾಗೃತಿ ಮೂಡಿಸುವ ಕೆಲಸವಾಗಬೇಕು
– ಗಡಿ ಗ್ರಾಮಗಳಲ್ಲಿ ಪಕ್ಷದ ವಿವಿಧ ಮೋರ್ಚಾಗಳು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡು ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಬೇಕು ಮೋದಿ ನಾಯಕತ್ವಕ್ಕೆ ಬಹುಪರಾಕ್
ಭಾರತವನ್ನು ಜಗತ್ತಿನ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಬದಲಾಯಿಸುವಲ್ಲಿ ಪ್ರಧಾನಿ ಮೋದಿ ಅವರ ನಾಯಕತ್ವದ ಪಾತ್ರವನ್ನು ಶ್ಲಾ ಸಿ ಸಾಮಾಜಿಕ-ಆರ್ಥಿಕ ನಿರ್ಣಯವನ್ನು ಬಿಜೆಪಿ ಕಾರ್ಯಕಾರಿಣಿ ಕೈಗೊಂಡಿದೆ. ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳು ಜನರ ಆಕಾಂಕ್ಷೆಗಳನ್ನು ಈಡೇರಿಸುತ್ತಿವೆ ಎಂದೂ ನಿರ್ಣಯದಲ್ಲಿ ಉಲ್ಲೇಖೀಸಲಾಗಿದೆ. ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ಅಂದರೆ ಕಳೆದ 9 ವರ್ಷಗಳಲ್ಲಿ ಜಾಗತಿಕವಾಗಿ ಭಾರತದ ವರ್ಚಸ್ಸು ವೃದ್ಧಿಸಿದೆ. ಹಿಂದೆಲ್ಲ ಬಿಕ್ಕಟ್ಟು ಎದುರಾದಾಗ ಭಾರತ ಬೇರೆ ದೇಶಗಳನ್ನು ಅವಲಂಬಿಸಬೇಕಾಗಿತ್ತು. ಈಗ ಎಲ್ಲ ಸವಾಲುಗಳನ್ನೂ ಎದುರಿಸಿ, ಇತರರಿಗೂ ನೆರವಾಗುತ್ತಿದೆ.
– ಎಸ್.ಜೈಶಂಕರ್, ವಿದೇಶಾಂಗ ಸಚಿವ