Advertisement

ಧಾರ್ಮಿಕ ಕೇಂದ್ರಗಳ ಕಾರ್ಯ ಸ್ತುತ್ಯರ್ಹ

06:10 AM Feb 20, 2018 | |

ಶ್ರವಣಬೆಳಗೊಳ: ದೇಶದಲ್ಲಿ ಧಾರ್ಮಿಕ ಕೇಂದ್ರಗಳು ಧಾರ್ಮಿಕ ಸೇವೆಯ ಜತೆಗೆ ಸಾಮಾಜಿಕ ಕಾರ್ಯದಲ್ಲಿ
ತೊಡಗಿಕೊಂಡಿರುವುದು ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement

ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕ ಮಹೋತ್ಸದ ಸಂದರ್ಭದಲ್ಲಿ ನಿರ್ಮಾಣವಾಗಿರುವ ಸಾರ್ವಜನಿಕ ಆಸ್ಪತ್ರೆ
ಮತ್ತು ಗೊಮ್ಮಟನ ದರ್ಶನಕ್ಕಾಗಿ ವಿಂಧ್ಯಗಿರಿ ಬೆಟ್ಟಕ್ಕೆ ತೆರಳಲು ನಿರ್ಮಿಸಿರುವ ನೂತನ ಮೆಟ್ಟಿಲು ಉದ್ಘಾಟಿಸಿ ಮಾತನಾಡಿದ ಅವರು, ಅನೇಕ ಮಠ ಮಾನ್ಯಗಳು ಶಿಕ್ಷಣ, ಆರೋಗ್ಯ ಸೇವೆ, ಮದ್ಯವ್ಯಸನ ಮುಕ್ತಗೊಳಿಸುವಂತಹ ಸಾಮಾಜಿಕ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿವೆ. ಇದು ನಮ್ಮ ದೇಶದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಹೇಳಿದರು.

ನಮ್ಮಲ್ಲಿ ಸಾಮಾಜಿಕ ಕಾರ್ಯಗಳಿಗಿಂತ ಧಾರ್ಮಿಕ ವಿಷಯಗಳೇ ಹೆಚ್ಚಾಗಿ ಚರ್ಚೆಯಾಗುತ್ತವೆ ಎಂಬ ಅಭಿಪ್ರಾಯವಿದೆ. ಆದರೆ, ಅದು ತಪ್ಪು ಕಲ್ಪನೆ. ಸಮಾಜದಲ್ಲಿ ಕಾಲ ಕಾಲಕ್ಕೆ ಸಂತರು, ಮುನಿಗಳು,ಆಚಾರ್ಯರು ಉದಯಿಸಿ ಸಮಾಜವನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಮಾರ್ಗದರ್ಶನ ಮಾಡುತ್ತ ಬಂದಿದ್ದಾರೆ. ಈಗ ಬದಲಾವಣೆಯ ಯುಗದಲ್ಲಿಯೂ ಉಚಿತ ಸಾರ್ವಜನಿಕ ಆಸ್ಪತ್ರೆ ಆರಂಭಿಸಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರವೂ ಬಡವರ ಆರೋಗ್ಯ ರಕ್ಷಣೆಗೆ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ವಿಶ್ವದ ಯಾವ ರಾಷ್ಟ್ರವೂ ಆಲೋಚನೆ
ಮಾಡದಂತಹ ಯೋಜನೆ ಜಾರಿಗೆ ತಂದಿದೆ. ದೇಶದ ಪ್ರತಿಯೊಬ್ಬ ಬಡವನ ಕುಟುಂಬದ ಆರೋಗ್ಯ ರಕ್ಷಣೆಗೆ ಆಯುಷ್‌ಮಾನ್‌ ಭಾರತ ವಿಮಾ ಯೋಜನೆ ಮೂಲಕ ವಾರ್ಷಿಕ ಐದು ಲಕ್ಷ ಸಹಾಯಧನ ನೀಡಲಾಗುತ್ತಿದೆ ಎಂದು ಹೇಳಿದರು.

ಬಡ ಕುಟುಂಬದಲ್ಲಿ ಒಬ್ಬ ವ್ಯಕ್ತಿ ಅನಾರೋಗ್ಯಕ್ಕೀಡಾದರೆ ಇಡೀ ಕುಟುಂಬ ಸಂಕಷ್ಟಕ್ಕೀಡಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ತಿಳಿಸಿದರು.

Advertisement

ಕೇಂದ್ರದ ಕೈಲಾದ ಸೇವೆ: ಬಾಹುಬಲಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಬಂದ ಬೇಡಿಕೆಯನ್ನು ಈಡೇರಿಸುವ ಮೂಲಕ ಕೈಲಾದ ಪ್ರಯತ್ನ ಮಾಡಿದ್ದೇವೆ. ಬಾಹುಬಲಿ ದರ್ಶನಕ್ಕೆ ಹೊಸ ಮೆಟ್ಟಿಲುಗಳನ್ನು ಮಾಡಲು ಬೇಡಿಕೆ ಬಂದಾಗ ಕೇಂದ್ರ ಸರ್ಕಾರ ಮುಕ್ತ ಮನಸ್ಸಿಂದ ಒಪ್ಪಿ ಕೆಲಸ ಮಾಡಿದೆ ಎಂದರು.

ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಬಾಹುಬಲಿ ಮಹಾ ಮಜ್ಜನ ಕಾರ್ಯಕ್ರಮದಲ್ಲಿ ಪ್ರಧಾನಿಯಾಗಿ ಪಾಲ್ಗೊಂಡಿರುವುದು ನನ್ನ ಭಾಗ್ಯ. ಮಹಾಮಜ್ಜನದ ಸಮಯದಲ್ಲಿಯೇ ನಾನು ಪ್ರಧಾನಿಯಾಗಿರುವುದು ನನ್ನ ಸೌಭಾಗ್ಯ.
– ನರೇಂದ್ರ ಮೋದಿ, ಪ್ರಧಾನಿ

Advertisement

Udayavani is now on Telegram. Click here to join our channel and stay updated with the latest news.

Next