Advertisement

ಸಂಶೋಧನೆ ಮತ್ತು ನಾವೀನ್ಯತೆಯ ಜಾಗತಿಕ ಕೇಂದ್ರವನ್ನಾಗಿ ಮಾಡಲು ಪ್ರಧಾನಿ ಕರೆ

02:15 PM Sep 10, 2022 | Team Udayavani |

ನವದೆಹಲಿ: ಭಾರತವನ್ನು ಸಂಶೋಧನೆ ಮತ್ತು ನಾವೀನ್ಯತೆಗಳ ಜಾಗತಿಕ ಕೇಂದ್ರವನ್ನಾಗಿ ಮಾಡಲು ಸಂಘಟಿತ ಪ್ರಯತ್ನಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಕರೆ ನೀಡಿದರು.

Advertisement

ಕೇಂದ್ರ-ರಾಜ್ಯ ವಿಜ್ಞಾನ ಸಮಾವೇಶದ ಉದ್ಘಾಟನಾ ಅಧಿವೇಶನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ”ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಆಧುನಿಕ ನೀತಿಗಳನ್ನು ರೂಪಿಸಲು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.ಭಾರತವು ‘ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ ಮತ್ತು ಜೈ ಅನುಸಂಧಾನ’ ಮಂತ್ರದೊಂದಿಗೆ ಮುನ್ನಡೆಯುತ್ತಿದೆ” ಎಂದರು.

ಈ ‘ಅಮೃತ ಕಾಲ’ದಲ್ಲಿ ಭಾರತವನ್ನು ಸಂಶೋಧನೆ ಮತ್ತು ನಾವೀನ್ಯತೆಯ ಜಾಗತಿಕ ಕೇಂದ್ರವನ್ನಾಗಿ ಮಾಡಲು ನಾವು ವಿವಿಧ ರಂಗಗಳಲ್ಲಿ ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ನಮ್ಮ ಸಂಶೋಧನೆಯನ್ನು ಸ್ಥಳೀಯ ಮಟ್ಟಕ್ಕೆ ಕೊಂಡೊಯ್ಯಬೇಕು. ಸ್ಥಳೀಯ ಸಮಸ್ಯೆಗಳಿಗೆ ಸ್ಥಳೀಯ ಪರಿಹಾರಗಳನ್ನು ಕಂಡುಕೊಳ್ಳಲು ಎಲ್ಲಾ ರಾಜ್ಯಗಳು ನಾವೀನ್ಯತೆಗೆ ಒತ್ತು ನೀಡುವುದು ಇಂದಿನ ಅಗತ್ಯವಾಗಿದೆ ಎಂದರು.

ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ವಿಜ್ಞಾನ, ನಾವೀನ್ಯತೆ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಆಧುನಿಕ ನೀತಿಗಳನ್ನು ರೂಪಿಸಲು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ, ವಿಜ್ಞಾನಿಗಳೊಂದಿಗೆ ಹೆಚ್ಚಿನ ಸಹಕಾರ ಮತ್ತು ಸಹಯೋಗದ ಅಗತ್ಯವನ್ನು ಒತ್ತಿ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next