Advertisement
ಶುಕ್ರವಾರ ನಗರದಲ್ಲಿರುವ ಪಕ್ಷದ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸೈನಿಕ ಶಾಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸುವ ಚುನಾವಣಾ ಪ್ರಚಾರ ಸಭೆ ವೇದಿಕೆ ವ್ಯವಸ್ಥೆ ಮಾಡಲಾಗಿದೆ. ಪಾಲ್ಗೊಳ್ಳುವ ಅಪೂರ್ವ ಕಾರ್ಯಕ್ರಮಕ್ಕೆ ಕಳೆದ ಒಂದು ವಾರದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
Related Articles
Advertisement
ಬೀದರ ಜಿಲ್ಲೆಯ ಹುಮ್ನಾಬಾದ ಕಾರ್ಯಕ್ರಮ ಮುಗುಸಿಕೊಂಡು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಅವರು ವಿಜಯಪುರ ಸೈನಿಕ ಶಾಲೆಗೆ ಆಗಮಿಸಲಿದ್ದು, ನೇರವಾಗಿ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ, ನಂತರ ಹಾರೋಗೇರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಜನರಿಗೆ ವಾಹನ ದಟ್ಟಣೆ ಆಗದಂತೆ ಸ್ಥಳಗಳಲ್ಲಿ ಪಾಕಿರ್ಂಗ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯ ಮೈದಾನ, ಅಟಲ್ ಬಿಹಾರಿ ವಾಜಪೇಯಿ ಶಾಲೆ, ರಿಂಗ್ ರೋಡ ಇಟಗಿ ಪೆಟ್ರೋಲ್ ಬಳಿ ಸೇರಿದಂತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುವ ಜನರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ, ಪಕ್ಷದ ಚುನಾವಣಾ ಉಸ್ತುವಾರಿ ಮಲ್ಲಿಕಾರ್ಜುನ ಜೋಗೂರ, ಸಂಜಯ ಪಾಟೀಲ ಕನಮಡಿ, ಬಸವರಾಜ ಬಿರಾದಾರ, ವಿಜಯ ಜೋಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು.