ವಾಷಿಂಗ್ಟನ್: ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯನ್ನು ನಿಲ್ಲಿಸುವತ್ತ ಭಾರತ ಮಾಡುವ ಯಾವುದೇ ಪ್ರಯತ್ನವನ್ನು ಶ್ವೇತಭವನ ಸ್ವಾಗತಿಸುತ್ತದೆ ಎಂದು ವಕ್ತಾರ ಜಾನ್ ಕಿರ್ಬಿ ಹೇಳಿದ್ದಾರೆ.
ಉಕ್ರೇನ್ – ರಷ್ಯಾ ನಡುವಿನ ಯುದ್ಧ ತಡೆಯುವ ಭಾರತದ ಪ್ರಯತ್ನ ತುಂಬಾ ತಡವಾಗಲಿಲ್ಲವೇ ಎಂಬ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಪ್ರಯತ್ನ ಬೇಕಾದರೂ ಮಾಡಲಿ. ಉಕ್ರೇನ್ ಮೇಲಿನ ದಾಳಿಯನ್ನು ನಿಲ್ಲಿಸಲು ಬೇಕಾಗುವ ಯಾವುದೇ ಪ್ರಯತ್ನಗಳನ್ನು ಅಮೆರಿಕ ಸ್ವಾಗತ ಮಾಡುತ್ತದೆ ಎಂದರು.
ಇದನ್ನೂ ಓದಿ:ದೆಹಲಿ ಅಬಕಾರಿ ನೀತಿ ಹಗರಣ: ವೈಎಸ್‌ಆರ್ ಕಾಂಗ್ರೆಸ್ ಸಂಸದರ ಪುತ್ರ ಬಂಧನ
“ಯುದ್ಧವನ್ನು ನಿಲ್ಲಿಸಲು ಪುಟಿನ್ ಅವರಿಗೆ ಇನ್ನೂ ಸಮಯವಿದೆ ಎಂದು ನಾನು ಭಾವಿಸುತ್ತೇನೆ. ಪ್ರಧಾನಿ ಮೋದಿ ಮನವರಿಕೆ ಮಾಡಬಹುದು; ಪ್ರಧಾನಿ ಮೋದಿ ಅವರು ಕೈಗೊಳ್ಳಲು ಸಿದ್ಧರಿರುವ ಯಾವುದೇ ಪ್ರಯತ್ನಗಳ ಬಗ್ಗೆ ಮಾತನಾಡಲು ನಾನು ಅವಕಾಶ ನೀಡುತ್ತೇನೆ. ಉಕ್ರೇನ್‌ನಲ್ಲಿ ಯುದ್ಧದ ಅಂತ್ಯ ಮಾಡಲು ಯಾವುದೇ ಪ್ರಯತ್ನವನ್ನು ಯುಎಸ್ ಸ್ವಾಗತಿಸುತ್ತದೆ” ಜಾನ್ ಕಿರ್ಬಿ ಹೇಳಿದರು.
ಭಾರತದ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಅವರು ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಒಂದು ದಿನದ ಬಳಿಕ ಬಂದ ಅಮೆರಿಕದ ಈ ಹೇಳಿಕೆ ಮಹತ್ವ ಪಡೆದಿದೆ.