Advertisement

ತಾಲಿಬಾನ್ ಹಿಡಿತದಲ್ಲಿ ಅಫ್ಘಾನ್  : ಮಹತ್ವದ ಸಭೆ ನಡೆಸಿದ ಮೋದಿ

08:10 PM Aug 17, 2021 | Team Udayavani |

ನವದೆಹಲಿ: ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶವಾದ ಹಿನ್ನೆಲೆಯಲ್ಲಿ ಭದ್ರತಾ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ   ತುರ್ತು ಸಭೆ ನಡೆಸಿದರು.

Advertisement

ಇಂದು (ಆ.17) ಸಂಜೆ ನಡೆದ ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಇಲಾಖೆ ಸಚಿವ ಎಸ್. ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭದ್ರತಾ ಸಲಹೆಗಾರ ಅಜಿತ್ ಧೋವಲ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲವಾದರೂ, ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರಿಂದ ಅಸ್ಥಿರತೆ ಉಂಟಾಗಿದೆ. ಇದರಿಂದ ಉಂಟಾಗುವ ಪರಿಣಾಮಗಳು ಮತ್ತು ಕೈಗೊಳ್ಳಬೇಕಿರುವ ಕ್ರಮಗಳ ಕುರಿತಂತೆ  ಚರ್ಚೆ ನಡೆಸಲಾಗಿದೆ ಎನ್ನಲಾಗುತ್ತಿದೆ. ಮುಂದೆ ಬರಬಹುದಾದ ಪರಿಸ್ಥಿತಿ ಎದುರಿಸಲು ಸನ್ನದ್ಧತೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

ಆಫ್ಗಾನ್ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಿ, ನಿರಂತರವಾಗಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರು ನಿನ್ನೆ ತಡರಾತ್ರಿಯವರೆಗೂ ಪರಿಸ್ಥಿತಿಯ ಅವಲೋಕನ ಮಾಡುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next