Advertisement

ದೀದಿ-ಪಿಣರಾಯಿ ವಿಜಯನ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ  

08:39 PM May 02, 2021 | Team Udayavani |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರಣಿ ಟ್ವೀಟ್ ಮಾಡಿ ಇಂದು ಪ್ರಕಟಗೊಂಡ ಪಂಚರಾಜ್ಯ ಚುನಾವಣೆಯಲ್ಲಿ ಗೆಲುವು ಪಡೆದ ಪಕ್ಷಗಳ ಮುಖಂಡರಿಗೆ ಅಭಿನಂದನೆ ತಿಳಿಸಿದ್ದಾರೆ.

Advertisement

ಮೊದಲಿಗೆ ಮಮತಾ ಬ್ಯಾನರ್ಜಿ ಅವರಿಗೆ ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ತೃಣಮೂಲ ಕಾಂಗ್ರೆಸ್​ನ ಗೆಲುವಿಗಾಗಿ ಮಮತಾ ಬ್ಯಾನರ್ಜಿ ನಿಮಗೆ ಅಭಿನಂದನೆಗಳು. ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರವನ್ನು ಮುಂದುವರಿಸುತ್ತದೆ. ಜನರ ಆಶೋತ್ತರಗಳನ್ನು ಈಡೇರಿಸಲು ಮತ್ತು ಕೋವಿಡ್-19 ಪಿಡುಗಿನಿಂದ ರಾಜ್ಯವನ್ನು ಹೊರತರಲು ನೆರವಾಗುತ್ತದೆ’ ಎಂದು ಭರವಸೆ ನೀಡಿದ್ದಾರೆ.

‘ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಮ್ಮ ಪಕ್ಷಕ್ಕೆ ಅಸ್ತಿತ್ವವೇ ಇರಲಿಲ್ಲ. ಆದರೆ ಈ ಬಾರಿ ಪಶ್ಚಿಮ ಬಂಗಾಳದ ಸೋದರ, ಸೋದರಿಯರು ನಮ್ಮ ಪಕ್ಷವನ್ನು ಆಶೀರ್ವದಿಸಿದ್ದಾರೆ. ಅಲ್ಲಿ ಬಿಜೆಪಿಯ ಅಸ್ತಿತ್ವವೂ ಗಣನೀಯ ಪ್ರಮಾಣದಲ್ಲಿ ವೃದ್ಧಿಸಿದೆ. ಬಿಜೆಪಿಯು ಜನರ ಸೇವೆಯನ್ನು ಮುಂದುವರಿಸುತ್ತದೆ. ನಮ್ಮ ಎಲ್ಲ ಕಾರ್ಯಕರ್ತರ ಪರಿಶ್ರಮವನ್ನು ನಾನು ಗೌರವಿಸುತ್ತೇನೆ’ ಎಂದು ಮೋದಿ ಭರವಸೆ ನೀಡಿದ್ದಾರೆ.

ಕೇರಳದಲ್ಲಿ ವಿಜಯ ಸಾಧಿಸಿರುವ ಪಿಣರಾಯಿ ವಿಜಯನ್ ಅವರನ್ನೂ ಅಭಿನಂದಿಸಿರುವ ಮೋದಿ, ‘ನಾವು ಹಲವು ವಿಚಾರಗಳಲ್ಲಿ ಜತೆಗೂಡಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ. ಕೋವಿಡ್-19 ಪಿಡುಗಿನಿಂದ ಭಾರತ ಹೊರಬರುವಂತೆ ಮಾಡಲು ಶ್ರಮಿಸುತ್ತೇವೆ’ ಎಂದು ಮೋದಿ ಭರವಸೆ ನೀಡಿದ್ದಾರೆ.

ಕೇರಳದಲ್ಲಿಯೂ ಬಿಜೆಪಿಗೆ ಮತ ಹಾಕಿರುವರನ್ನು ಮೋದಿ ಅಭಿನಂದಿಸಿದ್ದಾರೆ. ಪಕ್ಷವನ್ನು ತಳಮಟ್ಟದಿಂದ ಭದ್ರಪಡಿಸಲು ಶ್ರಮಿಸುತ್ತಿರುವ ಕಾರ್ಯಕರ್ತರ ಪರಿಶ್ರಮವನ್ನು ನಾನು ಗೌರವಿಸುತ್ತೇನೆ. ಕೇರಳ ಜನರ ಸೇವೆಯನ್ನು ನಮ್ಮ ಪಕ್ಷ ಮತ್ತು ಕಾರ್ಯಕರ್ತರು ನಿರಂತರ ಮಾಡಲಿದ್ದಾರೆ ಎಂದು ಮೋದಿ ಹೇಳಿದ್ದಾರೆ.

Advertisement

ತಮಿಳುನಾಡಿನಲ್ಲಿ ನಿಚ್ಚಳ ಜಯ ಸಾಧಿಸಿರುವ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಅವರನ್ನೂ ಮೋದಿ ಅಭಿನಂದಿಸಿದ್ದಾರೆ. ‘ದೇಶದ ಪ್ರಗತಿಗಾಗಿ ನಾವು ಒಗ್ಗೂಡಿ ಕೆಲಸ ಮಾಡೋಣ. ಪ್ರಾದೇಶಿಕ ಆಶೋತ್ತರಗಳನ್ನು ಈಡೇರಿಸಲು ಮತ್ತು ಕೋವಿಡ್-19 ಪಿಡುಗಿನ್ನು ಸೋಲಿಸಲು ಶ್ರಮಿಸೋಣ ಎಂದು ಕರೆ ನೀಡಿದ್ದಾರೆ.

ಎನ್​ಡಿಎ ಮೈತ್ರಿಕೂಟಕ್ಕೆ ಆಶೀರ್ವದಿಸಿದ ತಮಿಳುನಾಡಿನ ಜನರಿಗೆ ನಾನು ಕೃತಜ್ಞ. ರಾಜ್ಯದ ಕಲ್ಯಾಣಕ್ಕೆ ಮತ್ತು ತಮಿಳು ಸಂಸ್ಕೃತಿಯ ಶ್ರೇಷ್ಠತೆಯನ್ನು ಸಾರಿಹೇಳುವ ವಿಚಾರದಲ್ಲಿ ನಾವು ಬದ್ಧರಾಗಿದ್ದೇವೆ. ನಮ್ಮ ಕಾರ್ಯಕರ್ತರ ಕಠಿಣ ಪರಿಶ್ರಮವನ್ನು ನಾನು ಗೌರವಿಸುತ್ತೇನೆ ಎಂದು ಮೋದಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next