ಹೊಸದಿಲ್ಲಿ: ಪಾಕಿಸ್ಥಾನದ ನೂತನ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಶೆಹಬಾಜ್ ಷರೀಫ್ ಅವರಿಗೆ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ಶೆಹಬಾಜ್ ಷರೀಫ್ ಅವರನ್ನು ಅಭಿನಂದಿಸಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಭಾರತವು ಭಯೋತ್ಪಾದನೆ ಮುಕ್ತ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ” ಎಂಬ ಸಂದೇಶವನ್ನೂ ಸೇರಿಸಿದ್ದಾರೆ.
“ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದ ಮೊಹಮ್ಮದ್ ಶೆಹಬಾಜ್ ಷರೀಫ್ ಅವರಿಗೆ ಅಭಿನಂದನೆಗಳು. ಭಾರತವು ಭಯೋತ್ಪಾದನೆ ಮುಕ್ತ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ. ಇದರಿಂದ ನಾವು ನಮ್ಮ ಅಭಿವೃದ್ಧಿ ಮೇಲೆ ಗಮನ ಕೇಂದ್ರೀಕರಿಸಬಹುದು ಮತ್ತು ನಮ್ಮ ಜನರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಬಹುದು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದನ್ನೂ ಓದಿ:ಕೇಬಲ್ ಕಾರ್ ಅವಘಡ..ಹಲವರ ರಕ್ಷಣೆ-40ಗಂಟೆ ನಂತರವೂ ಮುಂದುವರಿದ ರಕ್ಷಣಾ ಕಾರ್ಯ
ಪಾಕಿಸ್ಥಾನ್ ಮುಸ್ಲಿಂ ಲೀಗ್ – ನವಾಜ್ (ಪಿಎಂಎಲ್-ಎನ್) ನ ಅಧ್ಯಕ್ಷ ಮತ್ತು ಮಾಜಿ ವಿಪಕ್ಷ ನಾಯಕ ಶೆಹಬಾಜ್ ಷರೀಫ್ ಅವರು ಸೋಮವಾರ ಪಾಕಿಸ್ಥಾನದ 23ನೇ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.