ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟ್ಟರ್ ಫಾಲೋವರ್ಸ್ ಗಳ ಸಂಖ್ಯೆ ಇಂದು 60 ಮಿಲಿಯನ್ ದಾಟಿದ್ದು ಆ ಮೂಲಕ ಜಾಗತಿಕವಾಗಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ 3ನೇ ವ್ಯಕ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿನಿತ್ಯ ಸಕ್ರೀಯರಾಗಿದ್ದು ಭಾರತದಲ್ಲಿ ಅತ್ಯಂತ ಹೆಚ್ಚು ಟ್ವಿಟ್ಟರ್ ಫಾಲೋವರ್ಸ್ ಹೊಂದಿದ ನಾಯಕರಾಗಿದ್ದಾರೆ. ಇವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2009 ರಲ್ಲಿ ಟ್ವಿಟ್ಟರ್ ಖಾತೆ ಆರಂಭಿಸಿದ್ದರು. 2014ರಲ್ಲಿ ಭಾರತದ ಪ್ರಧಾನಿ ಹುದ್ದೆಗೇರಿದಾಗ ಜನಪ್ರಿಯತೆಯೂ ಕೂಡ ಹೆಚ್ಚಾಗಿ ಸಾಮಾಜಿಕ ಜಾಲತಾಣಗಳಲ್ಲೂ ಫಾಲೋವರ್ಸ್ ಹೆಚ್ಚಾದರು.
ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳ ಮೂಲಕ ಜನರ ಸಮಸ್ಯೆಗಳಿಗೂ ದನಿಯಾಗಿದ್ದರು, ಪ್ರತಿಯೊಂದು ಹಾಗೂಹೋಗುಗಳನ್ನು ಕೂಡ ಹಂಚಿಕೊಳ್ಳುತ್ತಿದ್ದರು. ಇದೀಗ ಇವರ ಫಾಲೋವರ್ಸ್ ಸಂಖ್ಯೆ 6 ಕೊಟಿ ತಲುಪಿ ದಾಖಲೆಯಾಗಿದೆ.
ಸದ್ಯ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಟ್ವಿಟ್ಟರ್ ನಲ್ಲಿ 120 ಮಿಲಿಯನ್ ಫಾಲೋವರ್ಸ್ ಹೊಂದಿದ್ದು ಮೊದಲ ಸ್ಥಾನದಲ್ಲಿ ಇದ್ದಾರೆ. ಈಗೀನ ಅಮೆರಿಕಾದ ಅಧ್ಯಕ್ಷ ಡೊನಾಲಲ್ಡ್ ಟ್ರಂಪ್ 83 ಮಿಲಿಯನ್ ಗೂ ಅಧಿಕ ಫಾಲೋವರ್ಸ್ ಹೊಂದಿದ್ದು 2ನೇ ಸ್ಥಾನದಲ್ಲಿ ಇದ್ದಾರೆ. ಇದೀಗ ಪ್ರಧಾನಿ ಮೋದಿ 60 ಮಿಲಿಯನ್ ಫಾಲೋವರ್ಸ್ ಹೊಂದುವ ಮೂಲಕ ಮೂರನೇ ಸ್ಥಾನಕ್ಕೇರಿದ್ಧಾರೆ.
ಜಾಗತಿಕವಾಗಿ 330 ಮಿಲಿಯನ್ ತಿಂಗಳ ಸಕ್ರೀಯ ಬಳಕೆದಾರರು ಟ್ವಿಟ್ಟರ್ ನಲ್ಲಿದ್ದಾರೆ.