Advertisement

ಧಾರವಾಡ: ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ದೇಶಕ್ಕೆ ಸಮರ್ಪಿಸಿದ ಪ್ರಧಾನಿ

08:08 PM Mar 12, 2023 | Team Udayavani |

ಧಾರವಾಡ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಲ್ಲಿ “ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್” ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ದೇಶಕ್ಕೆ ಸಮರ್ಪಿಸಿದರು.

Advertisement

ಇತ್ತೀಚೆಗಷ್ಟೇ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯಿಂದ ಈ ದಾಖಲೆ ಗುರುತಿಸಿಕೊಂಡಿದ್ದು, ಸುಮಾರು 20 ಕೋಟಿ ರೂ. ವೆಚ್ಚದಲ್ಲಿ 1,507 ಮೀಟರ್ ಉದ್ದದ ಪ್ಲಾಟ್‌ಫಾರ್ಮ್ ನಿರ್ಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಧಾರವಾಡದ ಐಐಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು, ಹೊಸಪೇಟೆ-ಹುಬ್ಬಳ್ಳಿ-ತಿನೈಘಾಟ್ ವಿಭಾಗದ ವಿದ್ಯುದ್ದೀಕರಣ ಮತ್ತು ಹೊಸಪೇಟೆ ನಿಲ್ದಾಣದ ಮೇಲ್ದರ್ಜೆಗೇರಿಸಿ, ಈ ಪ್ರದೇಶದಲ್ಲಿ ಸಂಪರ್ಕವನ್ನು ಹೆಚ್ಚಿಸಲು ದೇಶಕ್ಕೆ ಸಮರ್ಪಿಸಿದರು.

530 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ವಿದ್ಯುದ್ದೀಕರಣ ಯೋಜನೆಯು ಇಲೆಕ್ಟ್ರಿಕ್ ತಡೆರಹಿತ ರೈಲು ಕಾರ್ಯಾಚರಣೆಯನ್ನು ಆರಂಭಿಸಿದೆ. ಹೊಸಪೇಟೆ ನಿಲ್ದಾಣವನ್ನು ಪುನರಾಭಿವೃದ್ಧಿ ಮಾಡಲಾಗಿದ್ದು, ಪ್ರಯಾಣಿಕರಿಗೆ ಅನುಕೂಲಕರ ಮತ್ತು ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗುವುದು. ಇದನ್ನು ಹಂಪಿ ಸ್ಮಾರಕಗಳನ್ನು ಹೋಲುವಂತೆ ವಿನ್ಯಾಸಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಿದರು. ಈ ಯೋಜನೆಗಳ ಒಟ್ಟು ಅಂದಾಜು ವೆಚ್ಚ ಸುಮಾರು 520 ಕೋಟಿ ರೂ.ಆಗಿದೆ.

Advertisement

ಸುಮಾರು 250 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಧಾರವಾಡ ಭಾಗದ ಜನರಿಗೆ ತೃತೀಯ ಹಂತದ ಹೃದಯ ಚಿಕಿತ್ಸೆ ನೀಡುವ ಜಯದೇವ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮತ್ತು 1,040 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವ ಧಾರವಾಡ ಬಹುಗ್ರಾಮ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.

ತುಪ್ಪರಿಹಳ್ಳ ಪ್ರವಾಹ ಹಾನಿ ನಿಯಂತ್ರಣ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸುಮಾರು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯೋಜನೆಯು ಪ್ರವಾಹದಿಂದ ಉಂಟಾಗುವ ಹಾನಿಯನ್ನು ತಗ್ಗಿಸುವ ಗುರಿಯನ್ನು ಹೊಂದಿದೆ ಮತ್ತು ತಡೆಗೋಡೆಗಳು ಮತ್ತು ಒಡ್ಡುಗಳ ನಿರ್ಮಾಣ ಮಾಡಲಾತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next