Advertisement

PM Modi: ಎಐಸಿಸಿ ಅಧ್ಯಕ್ಷರ ತವರು ಜಿಲ್ಲೆಯಲ್ಲಿ ಚುನಾವಣೆ ಕಹಳೆ

08:58 PM Mar 11, 2024 | Team Udayavani |

ಕಲಬುರಗಿ: ಲೋಕಸಭಾ ಚುನಾವಣೆ ದಿನಾಂಕ ದಿನಗಣನೆ ದಿನಗಣನೆ ಪ್ರಧಾನಿ ನರೇಂದ್ರ ಮೋದಿ ಎಐಸಿಸಿ ಅಧ್ಯಕ್ಷರ ತವರು ಜಿಲ್ಲೆಯಲ್ಲಿ ಚುನಾವಣೆ ಕಹಳೆ ಮೊಳಗಿಸಲು ಮಾರ್ಚ್ 16ರಂದು ಕಲಬುರಗಿಗೆ ಆಗಮಿಸುತ್ತಿದ್ದಾರೆ.

Advertisement

ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿ ಪ್ರವಾಸ ಕುರಿತು ಸಂಸದ ಡಾ. ಉಮೇಶ ಜಾಧವ್ ಹಾಗೂ ಬಿಜೆಪಿ ಮುಖಂಡರಾದ ಮಾಲೀಕಯ್ಯ ವಿ. ಗುತ್ತೇದಾರ, ರಾಜ್ಯ ವಕ್ತಾರ ರಾಜಕುಮಾರ ಪಾಟೀಲ್ ತೇಲ್ಕೂರ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಕಲಬುರಗಿ ನಗರ ಅಧ್ಯಕ್ಷ ಚಂದು ಪಾಟೀಲ್ ವಿವರಣೆ ನೀಡಿದರು.

ಪ್ರಧಾನಿ ಮೋದಿ ಕೇಂದ್ರ ಸರ್ಕಾರದ ಸಾಧನೆ ಹಾಗೂ ಕಲ್ಯಾಣ ಕರ್ನಾಟಕಕ್ಕೆ ನೀಡಿರುವ ಕೊಡುಗೆಗಳ ಕುರಿತಾಗಿ ವಿವರಣೆ ನೀಡುವರು. ಪ್ರಧಾನಿ ಮೋದಿ ಅವರ ಕಲಬುರಗಿ ಪ್ರವಾಸ ಪಕ್ಷಕ್ಕೆ ಮತ್ತಷ್ಟು ಚೈತನ್ಯ ತುಂಬಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next