Advertisement

PM Modi ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸನ್ನು ಈಡೇರಿಸಿದರು: ಸಿಎಂ ಯೋಗಿ

10:56 PM Jun 23, 2023 | Team Udayavani |

ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸನ್ನು ನನಸಾಗಿಸಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.

Advertisement

ಮುಖರ್ಜಿ ಅವರ ಪುಣ್ಯಸ್ಮರಣೆಯ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯನಾಥ್ ಅವರು ಕಾಶ್ಮೀರವನ್ನು ಉಳಿಸಲು ಮತ್ತು ಭಾರತದ ಏಕತೆಯನ್ನು ಖಚಿತಪಡಿಸಿಕೊಳ್ಳಲು ಅವರ ತ್ಯಾಗವನ್ನು ಶ್ಲಾಘಿಸಿದರು.

ಸ್ವಾತಂತ್ರ್ಯದ ನಂತರ ಕಾಶ್ಮೀರದ ಪರಿಸ್ಥಿತಿಯು ಕಾಂಗ್ರೆಸ್‌ನ ದೂರದೃಷ್ಟಿಯ ಕೊರತೆಯಿಂದ ಹಂತಹಂತವಾಗಿ ಹದಗೆಟ್ಟಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next