Advertisement
ರೋಡ್ ಶೋ ನಿರ್ಬಂಧಿಸುವಂತೆ ಕೋರಿ ವಕೀಲ ಎನ್.ಪಿ. ಅಮೃತೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾ| ವಿಜಯಕುಮಾರ್ ಎ. ಪಾಟೀಲ್ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠ, ಚುನಾವಣ ಆಯೋಗ, ನಗರ ಪೊಲೀಸ್ ಆಯುಕ್ತರು ಹಾಗೂ ಬಿಬಿಎಂಪಿ ಮುಖ್ಯಆಯುಕ್ತರ ಹೇಳಿಕೆ ಮತ್ತು ಭರವಸೆಗಳನ್ನು ದಾಖಲಿಸಿಕೊಂಡು ಅರ್ಜಿಯನ್ನು ಇತ್ಯರ್ಥಪಡಿಸಿತು.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ನಡೆಸುವ ರೋಡ್ ಶೋಗೆ ಅಡ್ಡಿಪಡಿಸಲು ಕಾಂಗ್ರೆಸ್ ಷಡ್ಯಂತ್ರ ಮಾಡುತ್ತಿದೆ. ಅವರದೇ ಕಾರ್ಯಕರ್ತರ ಆ್ಯಂಬುಲೆನ್ಸ್‌ಗಳನ್ನು ರೋಡ್ ಶೋ ಮಾರ್ಗದಲ್ಲಿ ಕಳುಹಿಸಲು ಸಂಚು ರೂಪಿಸಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಡ್ ಶೋ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹತಾಶೆ ಗೊಂಡಿದ್ದು, ಕೆಟ್ಟ ಹೆಸರು ತರುವುದಕ್ಕೆ ಷಡ್ಯಂತ್ರ ರೂಪಿ ಸುತ್ತಿದೆ. ಈ ನಿಟ್ಟಿನಲ್ಲಿ ರೋಗಿಗಳಿರುವ ಆ್ಯಂಬುಲೆನ್ಸ್ ಗಳನ್ನು ಖುದ್ದು ಆಸ್ಪತ್ರೆಗಳವರೆಗೆ ಬಿಡುವಂತೆ ಪೊಲೀಸರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು. ರವಿವಾರ ಮಧ್ಯಾಹ್ನ ನೀಟ್ ಪರೀಕ್ಷೆ ಇರುವುದ ರಿಂದ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾ ಗಿದೆ. ಮಕ್ಕಳ ಶಿಕ್ಷಣ ಮತ್ತು ಭವಿಷ್ಯದ ಬಗ್ಗೆ ವಿಶೇಷ ಕಳಕಳಿ ಹೊಂದಿರುವ ಪ್ರಧಾನಿ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲು ಸೂಚಿಸಿದ್ದಾರೆ. ರವಿವಾರ ಯಾವುದೇ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದರೆ, ಅವರು ಪ್ರವೇಶ ಪತ್ರ ತೋರಿಸಿದರೆ, ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪೋಲಿಸರು ಬಿಡುತ್ತಾರೆ. ಈ ಕುರಿತಂತೆ ಪೊಲೀಸರೊಂದಿಗೆ, ಎಸ್ಪಿಜಿಯವರೊಂದಿಗೆ ಚರ್ಚಿಸಲಾಗಿದೆ ಎಂದರು.