Advertisement
ಉಡುಪಿ ಜಿಲ್ಲಾ ಯುವಮೋರ್ಚಾ ಆಯೋಜಿಸಿದ್ದ ಯುವ ಭಾರತ ಸಮಾ ವೇಶದಲ್ಲಿ ಅವರು ಮಾತನಾಡಿದರು.
Related Articles
Advertisement
ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕಿಶೋರ್ ಕುಮಾರ್ ಕುಂದಾಪುರ, ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮುಖಂಡರಾದ ಅರುಣ್ ಕುಮಾರ್‌ಪುತ್ತಿಲ, ಶಾಸಕರಾದ ಸುನಿಲ್ ಕುಮಾರ್, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕೊಡ್ಗಿ, ಹರೀಶ್ ಪೂಂಜಾ ಹಾಗೂ ಪಕ್ಷದ ಮುಖಂಡರಾದ ಪ್ರಮೋದ್ ಮಧ್ವರಾಜ್, ಕೆ. ರಘುಪತಿ ಭಟ್, ಉದಯ ಕುಮಾರ್‌ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷರಾದ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಚೊಂಬು ಮತ್ತು ಬಾಂಬುಗಳೇ ಕಾಂಗ್ರೆಸ್ ಸರಕಾರದ ಸಾಧನೆ!ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುವ ಮುನ್ನ ಘೋಷಣೆ ಮಾಡಿದಂತೆ ನಾರಾಯಣ ಗುರು ನಿಗಮಕ್ಕೆ ಯಾವುದೇ ಅನುದಾನ ಒದಗಿಸಿಲ್ಲ. ಉಡುಪಿಯಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದಂತೆ ಬಂಟರ ಅಭಿವೃದ್ಧಿ ನಿಗಮವನ್ನು ಕೂಡ ಸ್ಥಾಪಿಸಿಲ್ಲ. ಉಡುಪಿ ಪರ್ಯಾಯ ಮಹೋತ್ಸವಕ್ಕೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ಘೋಷಣೆ ಮಾಡಿದ 10 ಕೋಟಿ ರೂ. ಇನ್ನೂ ಬಂದಿಲ್ಲ ಎಂದು ಯಶ್‌ಪಾಲ್ ಸುವರ್ಣ ತಿಳಿಸಿದರು. ದಲಿತ ವಿರೋಧಿ ನೀತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ 11 ಸಾವಿರ ಕೋಟಿ ಅನುದಾನ ಕಡಿತವಾಗಿದೆ. ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ಅನುದಾನದ ಭರವಸೆ ನೀಡಿದ್ದಾರೆ. ಆದರೆ ಕರಾವಳಿ ಜಿಲ್ಲೆಗಳ ದೇವಸ್ಥಾನ, ದೈವಸ್ಥಾನ, ಗರಡಿ, ಮಂದಿರಗಳ ಅಭಿವೃದ್ಧಿಗೆ ಯಾವುದೇ ಅನುದಾನ ನೀಡಿಲ್ಲ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ, ರಾಮ ನವಮಿ/ಜೈ ಶೀರಾಮ್ ಘೋಷಣೆಗೆ ಅಡ್ಡಿ, ಲವ್ ಜೆಹಾದ್ ಭಾಗವಾಗಿ ಜೆಹಾದಿ ಮನಸ್ಥಿತಿಯ ಫಯಾಜ್‌ನಿಂದ ಹುಬ್ಬಳ್ಳಿಯ ನೇಹಾ ಹಿರೇಮಠ ಕಗ್ಗೊಲೆ, ನಾಸೀರ್‌ಹುಸೇನ್ ಬೆಂಬಲಿಗರಿಂದ ಪಾಕ್ ಪರ ಘೋಷಣೆ ಮುಂತಾದ ಘಟನೆಗಳಿಂದ ರಾಜ್ಯದ ಜನತೆ ಬೇಸತ್ತಿದ್ದು ಸಿದ್ದರಾಮಯ್ಯ ಅವರ ಚೊಂಬು, ಬಾಂಬು ಸರಕಾರಕ್ಕೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲು ಸಿದ್ಧವಾಗಿದ್ದಾರೆ ಎಂದಿದ್ದಾರೆ.