ಬೆಂಗಳೂರು: ರಾಜಧಾನಿ ಹೊಸದಿಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆ ಪ್ರತ್ಯೇಕವಾಗಿ ಚರ್ಚೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸಿರುವ ಬಿಎಸ್ ಯಡಿಯೂರಪ್ಪ ಅವರ ಜೊತೆ ನರೇಂದ್ರ ಮೋದಿ ಕೆಲ ಹೊತ್ತು ಪ್ರತ್ಯೇಕ ಚರ್ಚೆ ನಡೆಸಿದ್ದಾರೆ. ಈ ವೇಳೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಸೇರಿದಂತೆ ಕೆಲವು ಕಾರ್ಯಕ್ರಮಗಳಿಗೆ ಪಿಎಂ ಅವರನ್ನು ಆಹ್ವಾನಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಪಂಚತಾರಾ ಹೋಟೆಲ್ ನಲ್ಲಿ 4 ತಿಂಗಳು ವಾಸ್ತವ್ಯ ಹೂಡಿ…“ಈತ” ಲಕ್ಷಾಂತರ ರೂ. ಬಾಡಿಗೆ ಕೊಡದೇ ವಂಚಿಸಿದ್ದು ಹೇಗೆ?
ಕರ್ನಾಟಕವು ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿದ್ದು, ಈ ವೇಳೆ ಬಿಎಸ್ ಯಡಿಯೂರಪ್ಪ ಅವರ ಜೊತೆಗಿನ ಮೋದಿ ಮಾತುಕತೆ ಮಹತ್ವ ಪಡೆದಿದೆ.
ಸಿಎಂ ವರದಿ: ಕಾರ್ಯಕಾರಣಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯದ ಬಗ್ಗೆ ವರದಿ ನೀಡಿದ್ದಾರೆ ಎನ್ನಲಾಗಿದೆ. ರಾಜಕೀಯ ಸ್ಥಿತಿಗತಿ, ಚುನಾವಣಾ ಪ್ರಚಾರದ ಮುಂತಾದ ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ.