ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಿದರು. ಬಹುಮುಖಿ ದ್ವಿಪಕ್ಷೀಯ ಬಾಂಧವ್ಯವನ್ನು ಮುಂದಕ್ಕೆ ಕೊಂಡೊಯ್ಯುವ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
ರಾಜ್ಯ ಪ್ರವಾಸಕ್ಕೆ ಆಗಮಿಸಿದ ಮೆಲೋನಿ ಅವರಿಗೆ ರಾಷ್ಟ್ರಪತಿ ಭವನದಲ್ಲಿ ವಿಧ್ಯುಕ್ತ ಸ್ವಾಗತ ನೀಡಲಾಯಿತು.ನಂತರ, ಹೈದರಾಬಾದ್ ಹೌಸ್‌ನಲ್ಲಿ ದ್ವಿಪಕ್ಷೀಯ ಮಾತುಕತೆಯನ್ನು ಪ್ರಾರಂಭಿಸುವ ಮೊದಲು ಪ್ರಧಾನಿ ಮೋದಿ, ಮೆಲೋನಿ ಅವರನ್ನು ಸ್ವಾಗತಿಸಿದರು.
“ರಾಜಕೀಯ, ವ್ಯಾಪಾರ ಮತ್ತು ಆರ್ಥಿಕ, ರಕ್ಷಣೆ, ವಿಜ್ಞಾನ ಮತ್ತು ತಂತ್ರಜ್ಞಾನ, ಇಂಧನ, ಆರೋಗ್ಯ, ದೂತಾವಾಸ ಮತ್ತು ಸಾಂಸ್ಕೃತಿಕ ಕ್ಷೇತ್ರಗಳನ್ನು ಒಳಗೊಂಡಿರುವ ವಿಸ್ತಾರವಾದ ಕಾರ್ಯಸೂಚಿಯು ಕಾಯುತ್ತಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ, ಪ್ರಧಾನಿ ಮೋದಿ ಮತ್ತು ಇಟಲಿ ಪ್ರಧಾನಿ ನಡುವೆ ಮಹತ್ವದ ಮಾತುಕತೆ ನಡೆಯುತ್ತಿದೆ. ಉಭಯ ರಾಷ್ಟ್ರಗಳ ಬೆಳವಣಿಗೆಯನ್ನು ಉತ್ತೇಜಿಸಲು ಪರಸ್ಪರ ಬದ್ಧತೆಯೊಂದಿಗೆ ಬಹುಮುಖಿ ದ್ವಿಪಕ್ಷೀಯ ಸಂಬಂಧಗಳನ್ನು ಮುಂದಕ್ಕೆ ಕೊಂಡೊಯ್ಯಲು ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ, ವಿವಿಧ ಕ್ಷೇತ್ರಗಳಲ್ಲಿ ಸಹಯೋಗವನ್ನು ವಿಸ್ತರಿಸುತ್ತಾರೆ ಮತ್ತು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಮೇಲೆ ಒಮ್ಮುಖವನ್ನು ಗಾಢವಾಗಿಸುತ್ತಾರೆ” ಎಂದು ಬಾಗ್ಚಿ ಹೇಳಿದ್ದಾರೆ.
ಭಾರತ ಮತ್ತು ಇಟಲಿ ಈ ವರ್ಷ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75 ನೇ ವರ್ಷವನ್ನು ಆಚರಿಸುತ್ತಿವೆ. ಬಹುಮುಖಿ ದ್ವಿಪಕ್ಷೀಯ ಸಂಬಂಧವು ಸಾಂಸ್ಕೃತಿಕ ಮೌಲ್ಯಗಳು, ಆರ್ಥಿಕ ಬೆಳವಣಿಗೆಗಳನ್ನ ಉತ್ತೇಜಿಸುವ ಬದ್ಧತೆ, ಹಸಿರು ಶಕ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ, ರಕ್ಷಣ ಕ್ಷೇತ್ರಗಳಲ್ಲಿ ಸಹಯೋಗ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಒಮ್ಮುಖದಿಂದ ಗುರುತಿಸಲ್ಪಟ್ಟಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.