ಸಮರ್ಕಂಡ್: ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ವಾರ್ಷಿಕ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಶುಕ್ರವಾರ ಮಾತುಕತೆ ನಡೆಸಿದರು.
ಈ ವರ್ಷದ ಫೆಬ್ರವರಿಯಲ್ಲಿ ಉಕ್ರೇನ್ ಸಂಘರ್ಷ ಭುಗಿಲೆದ್ದ ನಂತರ ಉಭಯ ನಾಯಕರ ನಡುವಿನ ಮೊದಲ ಸಭೆ ಇದಾಗಿದ್ದು, ಉಭಯ ನಾಯಕರು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸಿದರು ಎಂದು ತಿಳಿದುಬಂದಿದೆ.
ವಿಶೇಷವೆಂದರೆ ಉಕ್ರೇನ್ ಮೇಲಿನ ಆಕ್ರಮಣಕ್ಕಾಗಿ ರಷ್ಯಾವನ್ನು ಭಾರತ ಇನ್ನೂ ಟೀಕಿಸಿಲ್ಲ. ಮಾತುಕತೆ ಮೂಲಕ ಬಿಕ್ಕಟ್ಟು ಪರಿಹಾರಕ್ಕೆ ಒತ್ತಾಯಿಸುತ್ತಿದೆ.
ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೋವ್ ಅವರೊಂದಿಗೆ ಸಭೆ ನಡೆಸಿದರು. ಶೃಂಗಸಭೆಯನ್ನು ಆಯೋಜಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳು. ಭಾರತ ಮತ್ತು ಉಜ್ಬೇಕಿಸ್ತಾನ್ ನಡುವಿನ ಸಂಪರ್ಕ, ವ್ಯಾಪಾರ ಮತ್ತು ಸಾಂಸ್ಕೃತಿಕ ಸಹಕಾರವನ್ನು ಗಾಢಗೊಳಿಸುವ ಮಾರ್ಗಗಳನ್ನು ಚರ್ಚಿಸಲಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.