ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಫೆ.22) ಗುಜರಾತ್ ಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಜನರ ಶ್ರೇಯೋಭಿವೃದ್ಧಿಗಾಗಿ ಬರೋಬ್ಬರಿ 60,000 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:Bill to tax temples; ವಿಧಾನಸೌಧದೆದುರು ಹುಂಡಿಯಿಟ್ಟು ಹಣ ಸಂಗ್ರಹಿಸಲಿ: ವಿಜಯೇಂದ್ರ ಆಕ್ರೋಶ
ಇದಕ್ಕೂ ಮೊದಲು ಫೆಬ್ರವರಿ 10ರಂದು ಗುಜರಾತ್ ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಲಕ್ಷಕ್ಕೂ ಅಧಿಕ ಗೃಹ ನಿರ್ಮಾಣ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು.
ಪ್ರಧಾನಿ ಮೋದಿ ಅವರು ಇಂದು ಅಹಮದಾಬಾದ್ ನ ಪ್ರಧಾನಿ ನರೇಂದ್ರ ಮೋದಿ (ಮೋಟೆರಾ) ಸ್ಟೇಡಿಯಂನಲ್ಲಿ ನಡೆಯಲಿರುವ ಗುಜರಾತ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ 1.25 ಲಕ್ಷಕ್ಕೂ ಅಧಿಕ ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಪ್ರಧಾನಿ ಮೋದಿ ಅವರು ಗುಜರಾತ್ ನ ಮಹೆಸಾನ ಮತ್ತು ನವಸಾರಿಯಲ್ಲಿ ಎರಡು ಸಾರ್ವಜನಿಕ ಸಭೆಗಳಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದು, ಈ ಸಂದರ್ಭದಲ್ಲಿ ರಸ್ತೆ, ರೈಲು, ಇಂಧನ, ಆರೋಗ್ಯ, ಇಂಟರ್ನೆಟ್, ಸಂಪರ್ಕ, ನಗರಾಭಿವೃದ್ಧಿ, ನೀರು ಸರಬರಾಜು ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.