Advertisement

Gujaratಗೆ ಪ್ರಧಾನಿ ಮೋದಿ ಕೊಡುಗೆ; 60,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗೆ ಚಾಲನೆ

10:37 AM Feb 22, 2024 | Team Udayavani |

ಅಹಮದಾಬಾದ್:‌ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಫೆ.22) ಗುಜರಾತ್‌ ಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಜನರ ಶ್ರೇಯೋಭಿವೃದ್ಧಿಗಾಗಿ ಬರೋಬ್ಬರಿ 60,000 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:Bill to tax temples; ವಿಧಾನಸೌಧದೆದುರು ಹುಂಡಿಯಿಟ್ಟು ಹಣ ಸಂಗ್ರಹಿಸಲಿ: ವಿಜಯೇಂದ್ರ ಆಕ್ರೋಶ

ಇದಕ್ಕೂ ಮೊದಲು ಫೆಬ್ರವರಿ 10ರಂದು ಗುಜರಾತ್‌ ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಲಕ್ಷಕ್ಕೂ ಅಧಿಕ ಗೃಹ ನಿರ್ಮಾಣ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು.

ಪ್ರಧಾನಿ ಮೋದಿ ಅವರು ಇಂದು ಅಹಮದಾಬಾದ್‌ ನ ಪ್ರಧಾನಿ ನರೇಂದ್ರ ಮೋದಿ (ಮೋಟೆರಾ) ಸ್ಟೇಡಿಯಂನಲ್ಲಿ ನಡೆಯಲಿರುವ ಗುಜರಾತ್‌ ಮಿಲ್ಕ್‌ ಮಾರ್ಕೆಟಿಂಗ್‌ ಫೆಡರೇಶನ್‌ ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ 1.25 ಲಕ್ಷಕ್ಕೂ ಅಧಿಕ ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದ್ದಿರುವುದಾಗಿ ವರದಿ ತಿಳಿಸಿದೆ.

ಪ್ರಧಾನಿ ಮೋದಿ ಅವರು ಗುಜರಾತ್‌ ನ ಮಹೆಸಾನ ಮತ್ತು ನವಸಾರಿಯಲ್ಲಿ ಎರಡು ಸಾರ್ವಜನಿಕ ಸಭೆಗಳಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದು, ಈ ಸಂದರ್ಭದಲ್ಲಿ ರಸ್ತೆ, ರೈಲು, ಇಂಧನ, ಆರೋಗ್ಯ, ಇಂಟರ್ನೆಟ್‌, ಸಂಪರ್ಕ, ನಗರಾಭಿವೃದ್ಧಿ, ನೀರು ಸರಬರಾಜು ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next