ಭೋಪಾಲ್ : ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಮತದಾರರ ಒಲವು ಸಂಪಾದಿಸುವ ಉದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಧ್ಯಪ್ರದೇಶದ ರಾಜಗಢ ಜಿಲ್ಲೆಯ ಮೋಹನಪುರ ನೀರಾವರಿ ಯೋಜನೆಯನ್ನು ಇಂದು ಶನಿವಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಭಾಗಿಯಾಗಿದ್ದರು.
ಮಧ್ಯಪ್ರದೇಶದ ಜನರಿಗಾಗಿ ನಿರ್ಮಿಸಲ್ಪಟ್ಟಿರುವ ನಾಲ್ಕು ಸಾವಿರ ಕೋಟಿ ರೂ.ಗಳ ಈ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯನ್ನು ಉದ್ಘಾಟಿಸಲು ನಾನು ಹೆಮ್ಮೆ ಪಡುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
ಪ್ರಧಾನಿ ಮೋದಿ ಅವರು ರಾಜಗಢಕ್ಕೆ ಆಗಮಿಸಿದೊಡನೆ ಅವರಿಗೆ ಮುಖ್ಯಮಂತ್ರಿಗಳು ಭವ್ಯವಾದ ಸ್ವಾಗತ ನೀಡಿದರು. ಮೋಹನಪುರ ನೀರಾವರಿ ಯೋಜನೆಯಿಂದ ಜಿಲ್ಲೆಯ ಜನರ ಕೃಷಿ ಭೂಮಿಗೆ ನೀರುಣಿಸಲು ಮತ್ತು ಜನರಿಗೆ ಕುಡಿಯುವ ನೀರನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.
Related Articles
ಮೋದಿ ಅವರು ಮಧ್ಯಪ್ರದೇಶಕ್ಕೆ ಭೇಟಿ ನೀಡಿರುವ ಈ ಸಂದರ್ಭದಲ್ಲಿ ಇಂದೋರ್‌ನಲ್ಲಿನ ಶೇಹಾರಿ ವಿಕಾಸ್ ಮಹೋತ್ಸವ್‌ನಲ್ಲಿ ಪಾಲ್ಗೊಳ್ಳುವರು. ಸುಮಾರು 4,000 ಕೋಟಿ ರೂ. ಗಳ ಹಲವು ನಗರಾಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವರು ಎಂದು ಪ್ರಕಟನೆ ತಿಳಿಸಿದೆ.