Advertisement

ಪ್ರಧಾನಿ ಮೋದಿ ಸ್ಫೂರ್ತಿದಾಯಕ ವ್ಯಕ್ತಿ : ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್

02:46 PM Oct 09, 2021 | Team Udayavani |

ಹೊಸದಿಲ್ಲಿ : ನವೀಕರಿಸಬಹುದಾದ ಇಂಧನದ ಮೂಲಕ ಮಹತ್ವಾಕಾಂಕ್ಷೆಯ ವಾತಾವರಣ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ ಪ್ರಧಾನಿ ನರೇಂದ್ರ ಮೋದಿ ಯವರು ವಿಶ್ವದ ಇತರರಿಗೆ ಸ್ಫೂರ್ತಿದಾಯಕ ವ್ಯಕ್ತಿ ಎಂದು ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸನ್ ಶನಿವಾರ  ಹೇಳಿಕೆ ನೀಡಿದ್ದಾರೆ.

Advertisement

ಮೂರು ದಿನಗಳ ಭಾರತ ಪ್ರವಾಸಕ್ಕೆ ಆಗಮಿಸಿರುವ ಡ್ಯಾನಿಶ್ ನಾಯಕಿ ಮೆಟ್ಟೆ ಫ್ರೆಡೆರಿಕ್ಸನ್,ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ‘ಡೆನ್ಮಾರ್ಕ್ ಗೆ ಬರುವಂತೆ ನಾನು ನೀಡಿರುವ ಆಹ್ವಾನವನ್ನು ಪ್ರಧಾನಿ ಮೋದಿ ಸ್ವೀಕರಿಸಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.

‘ಎರಡೂ ಪ್ರಜಾಪ್ರಭುತ್ವ ರಾಷ್ಟ್ರಗಳು ನಿಯಮಗಳ ಮೇಲೆ ನಂಬಿಕೆಯುಳ್ಳ ಅಂತಾರಾಷ್ಟ್ರೀಯ ವ್ಯವಸ್ಥೆಯನ್ನು ಹೊಂದಿವೆ’ ಎಂದರು.

ಪ್ರಧಾನಿ ಮೋದಿ ಅವರು 2030ರ ವೇಳೆಗೆ 450 ಜಿಗಾ ವ್ಯಾಟ್ಸ್ ನವೀಕರಿಸಬಹುದಾದ ಇಂಧನ ಉತ್ಪಾದನೆಯ ಮಹತ್ವಾಕಾಂಕ್ಷೆ ಹೊಂದಿದ್ದಾರೆ.

ಪ್ರಧಾನಿ ಮೋದಿ ಮತ್ತು ಮೆಟ್ಟೆ ಫ್ರೆಡೆರಿಕ್ಸನ್ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

Advertisement

‘ಹಸಿರು ಕಾರ್ಯತಂತ್ರದ ಪಾಲುದಾರಿಕೆ ವಿಚಾರಕ್ಕೆ ಸಂಬಂಧಿಸಿ ಡೆನ್ಮಾರ್ಕ್ ಜೊತೆ ಭಾರತ ಸಹಭಾಗಿತ್ವ ಹೊಂದಿದೆ . ಎರಡೂ ದೇಶಗಳು ಪರಿಸರದ ಕುರಿತು ದೂರದರ್ಶಿತ್ವ ಹೊಂದಿದ್ದು, ಬದ್ಧತೆಯೊಂದಿಗೆ ಕೆಲಸ ಮಾಡುತ್ತೇವೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next