Advertisement

ಪ್ರಧಾನಿ ಮೋದಿ ದೇಶದ ದೈವಿ ಶಕ್ತಿ: ಪ್ರಮೋದ ಮುತಾಲಿಕ

04:27 PM Mar 23, 2024 | Team Udayavani |

ಉದಯವಾಣಿ ಸಮಾಚಾರ
ರಬಕವಿ-ಬನಹಟ್ಟಿ: ಹಿಂದೂಗಳಿಗಾಗಿ ಹಿಂದೂ ರಾಷ್ಟ್ರವನ್ನು ಉಳಿಸಿಕೊಳ್ಳುವುದು ಅಗತ್ಯವಾಗಿದೆ. ಪ್ರಧಾನಿ ಮೋದಿ ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಇಪ್ಪತ್ತೈದು ವರ್ಷಗಳ ಕಾಲ ಒಂದು ದಿನವೂ ರಜೆ ಪಡೆಯದೇ ದೇಶದ ಸೇವೆ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿಯವರನ್ನು ದೇಶದ ಪ್ರಧಾನಿಯನ್ನಾಗಿಸುವ ಜವಾಬ್ದಾರಿ
ಎಲ್ಲರ ಮೇಲಿದೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು.

Advertisement

ಬನಹಟ್ಟಿಯ ಈಶ್ವರಲಿಂಗ ಮೈದಾನದಲ್ಲಿ ಶ್ರೀರಾಮ ಸೇನೆಯು ಹಮ್ಮಿಕೊಂಡಿದ್ದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ್ರೋಹಿಗಳು ಹೆಚ್ಚಾಗುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ಮೊದಲಿನಿಂದಲೂ ಕಿಡಿಗೇಡಿ ಮತ್ತು ದೇಶದ್ರೋಹಿಗಳನ್ನು ರಕ್ಷಣೆ ಮಾಡುವ ಕಾರ್ಯ ಮಾಡುತ್ತಿದೆ. ನಿಮ್ಮ ಯುವಕರನ್ನು
ಹದ್ದು ಬಸ್ತಿನಲ್ಲಿಟ್ಟುಕೊಳ್ಳಬೇಕು ಎಂದು ಮುಸ್ಲಿಂ ಮುಖಂಡರಿಗೆ ಮುತಾಲಿಕ ಎಚ್ಚರಿಕೆ ನೀಡಿದರು.

2014ರ ಮುಂಚಿನ ಭಾರತ ಮತ್ತು 2014ರ ನಂತರದ ಭಾರತದಲ್ಲಿ ಸಾಕಷ್ಟು ಬದಲಾವಣೆ ಮತ್ತು ಪರಿವರ್ತನೆಗಳಾಗಿವೆ. ಪಾಕಿಸ್ತಾನ ಇಂದು ವಿಶ್ವದ ವಿವಿಧ ದೇಶಗಳಿಂದ ಭಿಕ್ಷೆ ಬೇಡುತ್ತಿದೆ. ಪ್ರತಿ ಹಳ್ಳಿಯಲ್ಲಿ ಜನರು ಈ ಬಾರಿ ಮೋದಿಯನ್ನು ಗೆಲ್ಲಿಸುವುದಾಗಿ ನಿಶ್ಚಯ ಮಾಡಿದ್ದಾರೆ ಎಂದು ತಿಳಿಸಿದರು.

ಮೈಗೂರಿನ ಶಿವಾನಂದ ಮಠದ ಗುರುಪ್ರಸಾದ ಸ್ವಾಮೀಜಿ ಮಾತನಾಡಿ, ಮೋದಿ ವಿಶ್ವದ ತಾಕತ್ತು. ಮೋದಿಯಿಂದಾಗಿ ಭಾರತ
ಇಂದು ವಿಶ್ವದ ಶ್ರೇಷ್ಠ ರಾಷ್ಟ್ರಗಳಲ್ಲಿ ಒಂದಾಗಿದೆ. ದೇಶದ ಸಂಸ್ಕೃತಿ, ಸಂಸ್ಕಾರ ಮೋದಿಯಿಂದ ಮಾತ್ರ ಉಳಿಯಲು ಸಾಧ್ಯ. ಪುಕ್ಕಟೆಗಳಿಗೆ ಆಸೆ ಪಡದೆ ದೇಶ ಕಟ್ಟಲು ಶ್ರಮಿಸುತ್ತಿರುವ ಮೋದಿ ಅವರಿಗೆ ಆಡಳಿತ ನೀಡಬೇಕು ಎಂದು ತಿಳಿಸಿದರು.

Advertisement

ಶ್ರೀರಾಮ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಗಂಗಾಧಾರ ಕುಲಕರ್ಣಿ, ಬಾಗಲಕೋಟೆ ಜಿಲ್ಲೆಯ ಬಿಜೆಪಿ ಓಬಿಸಿ ಮೋರ್ಚಾ ಘಟಕದ ಅಧ್ಯಕ್ಷ ಶಿವಾನಂದ ಗಾಯಕವಾಡ ಮಾತನಾಡಿದರು. ಕಿರಣಕುಮಾರ ದೇಸಾಯಿ, ಧರೆಪ್ಪ ಉಳ್ಳಾಗಡ್ಡಿ, ಶ್ರೀಶೈಲ ಬೀಳಗಿ, ಸುಭಾಸ ಚೋಳಿ, ಸಂಜಯ ತೆಗ್ಗಿ, ಶ್ರೀಶೈಲ ದಲಾಲ, ಸುರೇಶ ಅಕ್ಕಿವಾಟ, ಮಹಾಂತೇಶ ಹಿಟ್ಟಿನಮಠ, ಯಮನಪ್ಪ ಕೋರಿ, ಪ್ರವೀಣ ಚುಬಚಿ, ಕಾರ್ಯಕರ್ತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next