Advertisement

ಜಿಲ್ಲೆಗೊಂದು ವೈದ್ಯಕೀಯ ಕಾಲೇಜು: ಪ್ರಧಾನಿ ಆಶಯ

11:39 PM Sep 30, 2021 | Team Udayavani |

ಜೈಪುರ: “ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಒಂದು ವೈದ್ಯಕೀಯ ಕಾಲೇಜು ಇರಬೇಕು ಅಥವಾ ವೈದ್ಯಕೀಯ ಸ್ನಾತ ಕೋತ್ತರ ಕಾಲೇಜು ಸ್ಥಾಪನೆಯಾಗಬೇಕು. ಈ ಬಗ್ಗೆ ಕೇಂದ್ರ ಸರಕಾರ  ಕಾರ್ಯೋನ್ಮುಖವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement

ರಾಜಸ್ಥಾನದಲ್ಲಿ ನೂತನವಾಗಿ ನಿರ್ಮಿಸಲಾಗಿರುವ “ಇನ್‌ಸ್ಟಿಟ್ಯೂಟ್‌ ಆಫ್ ಪೆಟ್ರೋಕೆಮಿಕಲ್ಸ್‌ ಟೆಕ್ನಾಲಜಿ’ ಸಂಸ್ಥೆಯ ಉದ್ಘಾಟನೆ ಹಾಗೂ ಹೊಸ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ಕಾರ್ಯಕ್ರಮಗಳನ್ನು ವರ್ಚ್ಯುವಲ್‌ ಆಗಿ ನೆರವೇರಿಸಿದ ಅವರು, “ಕಳೆದ ಆರು ವರ್ಷಗಳಲ್ಲಿ ದೇಶದ ನಾನಾ ಭಾಗಗಳಲ್ಲಿ 170 ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲಾಗಿದೆ. ಹೊಸ 100 ವೈದ್ಯಕೀಯ ಕಾಲೇಜುಗಳನ್ನು ವೇಗವಾಗಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಇದರ ಜತೆಗೆ ಯೋಗ ಮತ್ತು ಆಯುರ್ವೇದವನ್ನೂ ಹೆಚ್ಚೆಚ್ಚು ಜನಪ್ರಿಯಗೊಳಿಸಲು ಪ್ರಯತ್ನಿಸಲಾಗುತ್ತಿದೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next