Advertisement

Telangana ; 6100 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

03:04 PM Jul 08, 2023 | Team Udayavani |

ವಾರಂಗಲ್: 21ನೇ ಶತಮಾನದ ಮೂರನೇ ದಶಕವು ಸುವರ್ಣ ಅವಧಿಯಾಗಿದ್ದು, ಇದನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಮತ್ತು ರಾಷ್ಟ್ರದ ಯಾವುದೇ ಭಾಗವು ವೇಗವಾಗಿ ಪ್ರಗತಿ ಸಾಧಿಸುವಲ್ಲಿ ಹಿಂದೆ ಬೀಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

Advertisement

ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ಎಸ್ ಬಹಿಷ್ಕಾರದ ಮಧ್ಯೆ, ಮೋದಿ ಅವರು ದಕ್ಷಿಣ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುಮಾರು 6,100 ಕೋಟಿ ರೂಪಾಯಿ ಮೌಲ್ಯದ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ.

ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಇಂದು ಇಡೀ ವಿಶ್ವವೇ ಭಾರತದಲ್ಲಿ ಹೂಡಿಕೆ ಮಾಡಲು ಮುಂದೆ ಬರುತ್ತಿದೆ. ಇಂದಿನ ಭಾರತ ಯುವ ಮತ್ತು ಶಕ್ತಿಯಿಂದ ತುಂಬಿದೆ.ದೇಶದ ಯಾವುದೇ ಭಾಗವು ಬೆಳವಣಿಗೆಯಲ್ಲಿ ಹಿಂದುಳಿದಿಲ್ಲ. ತೆಲಂಗಾಣವು ಎಲ್ಲಾ ನೆರೆಯ ಆರ್ಥಿಕ ಕಾರಿಡಾರ್‌ಗಳನ್ನು ಸಂಪರ್ಕಿಸುವ ಕೇಂದ್ರವಾಗಿ ಬದಲಾಗುತ್ತಿದೆ. ರಾಜ್ಯದ ಕೈಗಾರಿಕೆಗಳು ಮತ್ತು ಪ್ರವಾಸೋದ್ಯಮವು ಇದರಿಂದ ಪ್ರಯೋಜನ ಪಡೆಯುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next