Advertisement

15th BRICS Summit: ದಕ್ಷಿಣ ಆಫ್ರಿಕಾಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ

08:34 AM Aug 22, 2023 | Team Udayavani |

ನವದೆಹಲಿ: ಆಗಸ್ಟ್ 22-24 ರವರೆಗೆ ಜೋಹಾನ್ಸ್‌ಬರ್ಗ್‌ನಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ನಡೆಯಲಿರುವ 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದಾರೆ.

Advertisement

ಈ ಪ್ರವಾಸವು ಭಾರತ ಮತ್ತು ದಕ್ಷಿಣ ಆಫ್ರಿಕಾ ರಾಷ್ಟ್ರಗಳ ನಡುವಣ ರಾಜತಾಂತ್ರಿಕ ಸಂಬಂಧಗಳ 30ನೇ ವಾರ್ಷಿಕೋತ್ಸವದ ಪ್ರತೀಕವಾಗಿದೆ ಎಂದು ಬಣ್ಣಿಸಲಾಗುತ್ತಿದೆ.

ದಕ್ಷಿಣ ಆಫ್ರಿಕಾದ ಅಧ್ಯಕ್ಷ ಮಟಮೇಲಾ ಸಿರಿಲ್ ರಾಮಫೋಸಾ ಆಹ್ವಾನದ ಮೇರೆಗೆ ದಕ್ಷಿಣ ಆಫ್ರಿಕಾಕ್ಕೆ ತೆರಳಿರುವ ಪ್ರಧಾನಿ ಮೋದಿ ಅವರು ಶೃಂಗ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಅಲ್ಲದೆ ನಾಲ್ಕು ದೇಶಗಳ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.

ದಕ್ಷಿಣ ಆಫ್ರಿಕಾಕ್ಕೆ ತೆರಳುವ ಮೊದಲು ಜೋಹಾನ್ಸ್‌ಬರ್ಗ್‌ನಲ್ಲಿ ಉಪಸ್ಥಿತರಿರುವ ಕೆಲವು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲು ಮತ್ತು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಲಾದ ಹಲವಾರು ಅತಿಥಿ ದೇಶಗಳೊಂದಿಗೆ ಸಂವಾದ ನಡೆಸಲು ಎದುರು ನೋಡುತ್ತಿದ್ದೇನೆ ಎಂದು ಟ್ವಿಟರ್ ‘ಎಕ್ಸ್’ ನಲ್ಲಿ ಟ್ವೀಟ್ ಮಾಡಿದ್ದಾರೆ.

“ಬ್ರಿಕ್ಸ್ ಅಭಿವೃದ್ಧಿಯ ಅಗತ್ಯತೆಗಳು ಮತ್ತು ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ ಜೊತೆಗೆ ದಕ್ಷಿಣ ಆಫ್ರಿಕಾದೊಂದಿಗೆ ಸಂಬಂಧ ಗಟ್ಟಿಗೊಳಿಸುವ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ‘ಬ್ರಿಕ್ಸ್’ ವೇದಿಕೆಯಾಗಿದೆ ಎನ್ನಲಾಗಿದೆ.

Advertisement

ಬ್ರಿಕ್ಸ್ ಶೃಂಗಸಭೆಯ ಚಟುವಟಿಕೆಗಳ ಭಾಗವಾಗಿ ನಡೆಯಲಿರುವ ಬ್ರಿಕ್ಸ್-ಆಫ್ರಿಕಾ ಔಟ್ರೀಚ್ ಮತ್ತು ಬ್ರಿಕ್ಸ್ ಪ್ಲಸ್ ಡೈಲಾಗ್ ಈವೆಂಟ್‌ನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ದಕ್ಷಿಣ ಆಫ್ರಿಕಾ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಗ್ರೀಸ್‌ನ ಪ್ರಧಾನ ಮಂತ್ರಿ ಕಿರಿಯಾಕೋಸ್ ಮಿಟ್ಸೊಟಾಕಿಸ್ ಅವರ ಆಹ್ವಾನದ ಮೇರೆಗೆ ಆಗಸ್ಟ್ 25 ರಂದು ಗ್ರೀಸ್‌ನ ಅಥೆನ್ಸ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಪ್ರಧಾನಿ ‘ಇದು ನನ್ನ ಮೊದಲ ಭೇಟಿಯಾಗಿದೆ. 40 ವರ್ಷಗಳ ನಂತರ ಗ್ರೀಸ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಗೌರವ ನನಗಿದೆ ಅಲ್ಲದೆ ಗ್ರೀಸ್ ಭೇಟಿಯು ದೇಶಗಳ ಬಹುಮುಖಿ ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ತೆರೆಯಬಹುದು ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಪ್ರಧಾನಿ ಮೋದಿಯವರ ವೇಳಾಪಟ್ಟಿ:

ಮಧ್ಯಾಹ್ನ 3.55 – ಸ್ಯಾಂಡ್‌ಟನ್ ಕನ್ವೆನ್ಷನ್ ಸೆಂಟರ್‌ಗೆ ಆಗಮನ

ಸಂಜೆ 4.00 – ಬ್ರಿಕ್ಸ್ ಉದ್ಯಮ ವೇದಿಕೆಯ ನಾಯಕರ ಜೊತೆ ಸಂವಾದ

ಸಂಜೆ 6.00 ಗಂಟೆಗೆ – ಬ್ರಿಕ್ಸ್ ನಾಯಕರ ಬೀಳ್ಕೊಡುಗೆ ಸಮಾರಂಭ

ಕಾರ್ಯಕ್ರಮದ ನಂತರ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರ ಜೊತೆ ಭೋಜನ.

ಇದನ್ನೂ ಓದಿ: Uttarakhand ಭೂಕುಸಿತಕ್ಕೆ 4 ಮೃತ್ಯು, ಹಿಮಾಚಲದಲ್ಲಿ ಭಾರೀ ಮಳೆ ನಿರೀಕ್ಷೆ, ಶಾಲೆಗಳಿಗೆ ರಜೆ

Advertisement

Udayavani is now on Telegram. Click here to join our channel and stay updated with the latest news.

Next