Advertisement

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

08:26 AM Nov 22, 2024 | Team Udayavani |

ನವದೆಹಲಿ: ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾ ಮೂರೂ ರಾಷ್ಟ್ರಗಳ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ತವರಿಗೆ ಪ್ರಯಾಣ ಬೆಳೆಸಿದ್ದಾರೆ.

Advertisement

ಐದು ದಿನಗಳಲ್ಲಿ ಮೂರೂ ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದ ಮೋದಿ ಈ ವೇಳೆ ಭಾರತ-ಕೆರಿಬಿಯನ್ ಸಮುದಾಯ ಶೃಂಗಸಭೆಯ ಸಹ-ಅಧ್ಯಕ್ಷರಾಗಿ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದರು ಜೊತೆಗೆ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು. ಗುರುವಾರ ಗಯಾನಾದಿಂದ ಭಾರತಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದೆ.

ನೈಜೀರಿಯಾದಿಂದ ಪ್ರಯಾಣ ಪ್ರಾರಂಭ:
ಪ್ರಧಾನಿಯವರು ಭಾನುವಾರ ನೈಜೀರಿಯಾಕ್ಕೆ ಆಗಮಿಸಿದ್ದರು, ಇದು 17 ವರ್ಷಗಳ ನಂತರ ಪಶ್ಚಿಮ ಆಫ್ರಿಕಾ ದೇಶಕ್ಕೆ ಭಾರತೀಯ ಪ್ರಧಾನಿಯ ಮೊದಲ ಭೇಟಿಯಾಗಿದೆ. ಅಲ್ಲಿ ಅವರು ಅಧ್ಯಕ್ಷ ಬೋಲಾ ಅಹ್ಮದ್ ಟಿನುಬು ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು. ಅವರ ಭೇಟಿಯ ಸಮಯದಲ್ಲಿ, ಅವರಿಗೆ ನೈಜೀರಿಯಾದ ರಾಷ್ಟ್ರೀಯ ಪ್ರಶಸ್ತಿ, ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್ (GCON) ಅನ್ನು ನೀಡಲಾಯಿತು.

ಜಿ-20 ಶೃಂಗಸಭೆಯಲ್ಲಿ ಭಾಗಿ:
ನೈಜೀರಿಯಾದಿಂದ, ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಮೋದಿ ಬ್ರೆಜಿಲ್‌ಗೆ ತೆರಳಿದರು, ಅಲ್ಲಿ ಅವರು ಯುಎಸ್ ಅಧ್ಯಕ್ಷ ಜೋ ಬಿಡೆನ್, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಸೇರಿದಂತೆ ಜಾಗತಿಕ ನಾಯಕರನ್ನು ಭೇಟಿಯಾದರು. ಅಲ್ಲದೆ ವಿಶ್ವದ ಇತರ ಹಲವು ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

Advertisement

ನಂತರ ಪ್ರಧಾನಮಂತ್ರಿಯವರು ಗಯಾನಾಗೆ ಪ್ರಯಾಣ ಬೆಳೆಸಿದರು, ಇದು 50 ವರ್ಷಗಳ ನಂತರ ಕೆರಿಬಿಯನ್ ರಾಷ್ಟ್ರಕ್ಕೆ ಭಾರತೀಯ ರಾಷ್ಟ್ರದ ಮುಖ್ಯಸ್ಥರ ಮೊದಲ ಭೇಟಿಯಾಗಿದೆ. ಅವರು ಕೆರಿಬಿಯನ್ ಪಾಲುದಾರ ರಾಷ್ಟ್ರಗಳ ನಾಯಕರು ಭಾಗವಹಿಸಿದ್ದ 2ನೇ ಭಾರತ-CARICOM ಶೃಂಗಸಭೆಯ ಸಹ-ಅಧ್ಯಕ್ಷರಾಗಿದ್ದರು. ಅವರ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿಯವರಿಗೆ ಗಯಾನಾ ಅಧ್ಯಕ್ಷ ಇರ್ಫಾನ್ ಅಲಿ ಅವರು ದೇಶದ ಅತ್ಯುನ್ನತ ಪ್ರಶಸ್ತಿಯಾದ ‘ದಿ ಆರ್ಡರ್ ಆಫ್ ಎಕ್ಸಲೆನ್ಸ್’ ಅನ್ನು ಸಹ ಪಡೆದರು.

ಇದನ್ನೂ ಓದಿ: Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

 

Advertisement

Udayavani is now on Telegram. Click here to join our channel and stay updated with the latest news.

Next