ನವದೆಹಲಿ: ದೆಹಲಿಯ ವಿಜಯ್ ಚೌಕ್‌ನಿಂದ ಇಂಡಿಯಾ ಗೇಟ್‌ವರೆಗಿನ ನವೀಕರಿಸಲಾದ ಸೆಂಟ್ರಲ್ ವಿಸ್ತಾ ಅವೆನ್ಯೂ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೆ.8ರಂದು ಉದ್ಘಾಟಿಸುವ ಸಾಧ್ಯತೆಯಿದೆ.
ಸುಮಾರು 1.1 ಲಕ್ಷ ಚದರ ಅಡಿ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಲಾದ ಮಾರ್ಗವು ಕೆಂಪು ಬಣ್ಣದ ಗ್ರಾನೈಟ್‌ನಿಂದ ನಿರ್ಮಿಸಲಾದ ನಡಿಗೆ ಪಥ, ಮಾರ್ಗದುದ್ದಕ್ಕೂ 133ಕ್ಕೂ ಹೆಚ್ಚು ಬೀದಿ ದೀಪಗಳು, 4,087 ಮರಗಳು ಮತ್ತು 114 ಅಧುನಿಕ ನಾಮಫಲಕಗಳು ಮತ್ತು ತೋಟಗಳನ್ನು ಹೊಂದಿದೆ.
ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷೆಯ ಸೆಂಟ್ರಲ್ ವಿಸ್ತಾ ಪುನರ್‌ಅಭಿವೃದ್ಧಿ ಯೋಜನೆಯ ಮೊದಲ ಕಾಮಗಾರಿ ಇದಾಗಿದೆ.
“ಸೆಂಟ್ರಲ್ ವಿಸ್ತಾ ಅವೆನ್ಯೂ ಕಾಮಗಾರಿ ಪೂರ್ಣಗೊಂಡಿದ್ದು, ಮೋದಿ ಅವರು ಸೆ.8ರಂದು ಉದ್ಘಾಟಿಸುವ ಸಾಧ್ಯತೆಯಿದೆ.
ನಡಿಗೆದಾರರಿಗೆ ಅನುಕೂಲವಾಗುವಂತೆ 4 ಸುರಂಗ ಮಾರ್ಗ ನಿರ್ಮಿಸಲಾಗಿದೆ. ಇಡೀ ಆವರಣದಲ್ಲಿ 422 ಕೆಂಪು ಗ್ರಾನೈಟ್‌ನ ಆಸನಗಳನ್ನು ನಿರ್ಮಿಸಲಾಗಿದೆ. ಹಳೆಯ ಮ್ಯಾನ್‌ಹೋಲ್‌ಗಳ ಜಾಗದಲ್ಲಿ ನೂತನ ಮ್ಯಾನ್‌ಹೋಲ್‌ಗಳನ್ನು ನಿರ್ಮಿಸಲಾಗಿದೆ,” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.