Advertisement

ಶಾಂಘೈ ಶೃಂಗಸಭೆ: ಉಜ್ಬೇಕಿಸ್ತಾನಕ್ಕೆ ಪ್ರಧಾನಿ ಮೋದಿ

09:32 PM Sep 15, 2022 | Team Udayavani |

ನವದೆಹಲಿ: ಶಾಂಘೈ ಸಹಕಾರ ಒಕ್ಕೂಟದ 22ನೇ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉಜ್ಬೇಕಿಸ್ತಾನದ ಸಮರಕಂಡ ನಗರಕ್ಕೆ ತೆರಳಿದ್ದಾರೆ.

Advertisement

ಶೃಂಗದಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌, ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸುತ್ತಿದ್ದಾರೆ.

“ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಸಮಸ್ಯೆಗಳ ಕುರಿತು ವಿಚಾರ ವಿನಿಮಯ ಹಾಗೂ ವ್ಯಾಪಾರ, ಆರ್ಥಿಕತೆ, ಸಂಸ್ಕೃತಿ, ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಶಾಂಘೈ ಸಹಕಾರ ಒಕ್ಕೂಟದ ರಾಷ್ಟ್ರಗಳೊಂದಿಗೆ ಪರಸ್ಪರ ಸಹಕಾರವನ್ನು ಎದುರು ನೋಡುತ್ತಿದ್ದೇನೆ,’ ಎಂದು ಪ್ರಧಾನಿ ಮೋದಿ ಅವರು ಉಜ್ಬೇಕಿಸ್ತಾನಕ್ಕೆ ತೆರಳುವ ಮುನ್ನ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next