ನವದೆಹಲಿ: ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
ದ್ರೌಪದಿ ಮುರ್ಮು ಅವರ ಅಧ್ಯಕ್ಷೀಯ ನಾಮನಿರ್ದೇಶನವು ಭಾರತದಾದ್ಯಂತ ಸಮಾಜದ ಎಲ್ಲಾ ವರ್ಗಗಳಿಂದ ಮೆಚ್ಚುಗೆ ಪಡೆದಿದೆ. ತಳಮಟ್ಟದ ಸಮಸ್ಯೆಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಭಾರತದ ಅಭಿವೃದ್ಧಿಯ ದೃಷ್ಟಿಕೋನವು ಅತ್ಯುತ್ತಮವಾಗಿದೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ವಿಪಕ್ಷಗಳು ಅಚ್ಚರಿಯ ಆಯ್ಕೆಯಾಗಿ ಒಡಿಶಾದ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿ ಮಂಗಳವಾರ ಘೋಷಿಸಲಾಗಿತ್ತು. 64 ರ ಹರೆಯದ, ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ದ್ರೌಪದಿ ಮುರ್ಮು ಝಾರ್ಖಂಡ್‌ನ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದ್ದರು. ಈಗಾಗಲೇ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಲಾಗಿದೆ.