Advertisement

Watch Live: ತುಮಕೂರು ಸಿದ್ದಗಂಗಾ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

10:00 AM Jan 03, 2020 | Nagendra Trasi |

ತುಮಕೂರು/ಬೆಂಗಳೂರು: ಕಲ್ಪತರು ನಾಡಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯರಾದ ಡಾ.ಸಿದ್ದಗಂಗಾಶ್ರೀಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ನಂತರ ಆಯ್ದ ಮಕ್ಕಳ ಜತೆ ಸಂವಾದ ನಡೆಯಲಿದೆ ಎಂದು ವರದಿ ತಿಳಿಸಿದೆ.

Advertisement

ಸಂವಾದದಲ್ಲಿ ಬೆಂಗಳೂರಿನ ಜಯನಗರ ಖಾಸಗಿ ಶಾಲೆಯ ವಿದ್ಯಾರ್ಥಿನಿ ಬೇಬಿಶ್ರೀ ಪಾಲ್ಗೊಳ್ಳುತ್ತಿದ್ದಾಳೆ. ಪ್ರಧಾನಿ ಮೋದಿಗೆ ಪ್ರಶ್ನೆ ಕೇಳಲು ಉತ್ಸುಕಳಾಗಿದ್ದೇನೆ ಎಂದು ಟಿವಿ9 ಜತೆ ಸಂತಸ ಹಂಚಿಕೊಂಡಿದ್ದಾಳೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊಬೈಲ್ ಕುರಿತು ಪ್ರಶ್ನೆ ಕೇಳಲು ತಯಾರಿ ನಡೆಸಿದ್ದೇನೆ ಎಂದು ಈ ಸಂದರ್ಭದಲ್ಲಿ ಹೇಳಿದಳು. ಸಿದ್ದಗಂಗಾಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದು, ನಂತರ ವಿದ್ಯಾರ್ಥಿಗಳ ಜತೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next